ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಮತೋಲನ ನಿವಾರಣೆಗೆ ಒತ್ತು: ಎಚ್‌.ಡಿ.ಕುಮಾರಸ್ವಾಮಿ

ಕೊಪ್ಪಳದಲ್ಲಿ ಆಟಿಕೆ, ಬಳ್ಳಾರಿಯಲ್ಲಿ ಜವಳಿ ಪಾರ್ಕ್‌ ಕ್ಲಸ್ಟರ್‌
Last Updated 19 ಫೆಬ್ರುವರಿ 2019, 19:31 IST
ಅಕ್ಷರ ಗಾತ್ರ

ಬೆಂಗಳೂರು: ‘ಹಿಂದುಳಿದ ಜಿಲ್ಲೆಗಳಲ್ಲಿಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡುವ ಮೂಲಕ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸರ್ಕಾರ ಶ್ರಮಿಸುತ್ತಿದೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೊಪ್ಪಳ ಆಟಿಕೆ ಮತ್ತು ಬಳ್ಳಾರಿ ಜವಳಿ ಕೈಗಾರಿಕಾಕ್ಲಸ್ಟರ್‌ ನಿರ್ಮಾಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕಳೆದ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಕ್ಲಸ್ಟರ್‌ಗಳನ್ನು ಸ್ಥಾಪಿಸಲಾಗುವುದು. ಕೊಪ್ಪಳ ಮತ್ತು ಬಳ್ಳಾರಿಯಲ್ಲಿ ಕ್ಲಸ್ಟರ್‌ ನಿರ್ಮಾಣ ಮಾಡಲಾಗುತ್ತಿದೆ.ಇದರಿಂದಪ್ರತಿ ಜಿಲ್ಲೆಯಲ್ಲೂ ಒಂದು ಲಕ್ಷಕ್ಕೂ ಹೆಚ್ಚುಉದ್ಯೋಗ ಸೃಷ್ಟಿಯಾಗಲಿದೆ. ಮೂಲಸೌಕರ್ಯ ಮತ್ತು ನಗರಾಭಿವೃದ್ಧಿ ಆಗುತ್ತದೆ’ ಎಂದುಹೇಳಿದರು.

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ,‘ಸರ್ಕಾರ ಕೈಗಾರಿಕೆಗಳ ಅಭಿವೃದ್ಧಿಗೆ ಬದ್ಧವಾಗಿದೆ. ಬದ್ಧತೆಯ ಕಾರಣ ರಾಜ್ಯ ಜಿಡಿಪಿಯಲ್ಲಿ ಐದನೇ ಸ್ಥಾನದಲ್ಲಿದೆ. ಕೈಗಾರಿಕಾ ಜಿಡಿಪಿ ಶೇ 17ರಷ್ಟಿದೆ. 2017–18ರ ಸಾಲಿನಲ್ಲಿ32.7 ಬಿಲಿಯನ್‌ ಡಾಲರ್‌ ವಿದೇಶಿ ನೇರ ಬಂಡವಾಳ ಹೂಡಿಕೆಯಾಗಿದೆ’ ಎಂದು ಹೇಳಿದರು.

‘ಸ್ಟಾರ್ಟ್ ಅಪ್‌ ನೀತಿ ತಂದ ಮೊದಲ ರಾಜ್ಯ ಕರ್ನಾಟಕ. ಚೀನಾ ಮಾದರಿ ಕೈಗಾರಿಕಾ ಕ್ಲಸ್ಟರ್‌ಗಳನ್ನು ಸ್ಥಾಪಿಸುವ ಮೂಲಕ ಜಿಲ್ಲೆಗಳನ್ನೂ ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇವೆ’ ಎಂದರು.

ಶಾಹಿ ಎಕ್ಸಪೋರ್ಟ್‌, ಬೈನರಿ ಅಪರೆಲ್‌ ಪಾರ್ಕ್‌, ಗೋಕುಲ್‌ ದಾಸ್‌ಎಕ್ಸ್‌ಪೋರ್ಟ್‌ ಮತ್ತುರಾಯಲ್‌ ಇಂಟೆಕ್ಸ್‌ ಅಪರೆಲ್‌ ಕಂಪನಿಗಳು ಕೊಪ್ಪಳ, ಬಳ್ಳಾರಿಯಲ್ಲಿ ಕ್ಲಸ್ಟರ್‌ ನಿರ್ಮಾಣಕ್ಕೆ ಸಂಬಂಧಿಸಿದ ಒಡಂಬಡಿಕೆಗೆ ಸಹಿ ಹಾಕಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT