ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ವರ್ಷದಿಂದ ಇಂಗ್ಲಿಷ್ ಕಲಿಕೆ: ಕುಮಾರಸ್ವಾಮಿ

ಶಿಕ್ಷಕರಿಗೆ ತರಬೇತಿ ಆರಂಭ
Last Updated 11 ಡಿಸೆಂಬರ್ 2018, 19:34 IST
ಅಕ್ಷರ ಗಾತ್ರ

ಬೆಳಗಾವಿ: ರಾಜ್ಯದ ಒಂದು ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ2019–20ನೇ ಶೈಕ್ಷಣಿಕ ವರ್ಷದಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ತಿಳಿಸಿದರು.

ಬಿಜೆಪಿಯ ಉಮಾನಾಥ ಕೋಟ್ಯಾನ್‌ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ ಅವರು, ‘ಈ ಸಲುವಾಗಿ ಶಿಕ್ಷಕರಿಗೆ ಇಂಗ್ಲಿಷ್‌ ಪ್ರಾದೇಶಿಕ ಸಂಸ್ಥೆಯಲ್ಲಿ ತರಬೇತಿ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಈ ಸಂಸ್ಥೆಯಲ್ಲಿ ವಿಡಿಯೊ ಕೌನ್ಸೆಲಿಂಗ್‌ ಸೌಕರ್ಯವೂ ಇದೆ. ಪಠ್ಯಪುಸ್ತಕ, ಆಡಿಯೊ– ವಿಡಿಯೊ ಕಲಿಕಾ ಕಿಟ್‌ಗಳು ಹಾಗೂ ಇ–ಕಲಿಕಾ ಸಾಧನಗಳನ್ನು ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ ಸಿದ್ಧಪಡಿಸುತ್ತಿದೆ’ ಎಂದರು.

‘ಇಂಗ್ಲಿಷ್‌ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಉದ್ದೇಶದಿಂದಲೇ 1715 ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಇನ್ನೂ 1 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ’ ಎಂದರು.

1994ರಿಂದ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್‌ ಅನ್ನು ಒಂದು ಭಾಷೆಯಾಗಿ ಕಲಿಸಲಾಗುತ್ತಿದೆ. ಕಳೆದ ಕೆಲವು ವರ್ಷಗಳಿಂದ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಶಾಲೆ ಆರಂಭಿಸಬೇಕು ಎಂಬ ಚರ್ಚೆ ನಡೆಯುತ್ತಿದೆ. ಇದಕ್ಕೆ ಹೋರಾಟಗಾರರು ವಿರೋಧಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT