ಗುರುವಾರ , ನವೆಂಬರ್ 21, 2019
21 °C
ಕೇಂದ್ರ ಕಾರಾಗೃಹಕ್ಕೆ ಜಿಲ್ಲಾಧಿಕಾರಿ ಭೇಟಿ

ಜೈಲಿನ ಆಸ್ಪತ್ರೆ ವಿಸ್ತರಣೆಗೆ ಪ್ರಸ್ತಾವ

Published:
Updated:

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಜಿಲ್ಲಾಧಿಕಾರಿ ಶಿವಮೂರ್ತಿ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ಜೈಲಿನಲ್ಲಿರುವ ಆಸ್ಪತ್ರೆ ಚಿಕ್ಕದಾಗಿದೆ. ಕೈದಿಗಳಿಗೆ ಚಿಕಿತ್ಸೆ ನೀಡಲು ಹೊರಗಿನ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾದ ಸ್ಥಿತಿ ಇದೆ. ಆಸ್ಪತ್ರೆ ವಿಸ್ತರಣೆಗೆ ಕ್ರಮ ಕೈಗೊಳ್ಳಿ’ ಎಂದು ಜೈಲಿನ ಅಧಿಕಾರಿಗಳು ಜಿಲ್ಲಾಧಿಕಾರಿ ಅವರನ್ನು ಕೋರಿದರು. ಜಿಲ್ಲಾಧಿಕಾರಿ, ‘ವರದಿ ಸಿದ್ಧಪಡಿಸಿ ಪ್ರಸ್ತಾವ ಸಲ್ಲಿಸಿ. ಸರ್ಕಾರಕ್ಕೆ ಸಲ್ಲಿಸೋಣ’ ಎಂದರು.

ಪ್ರತಿಕ್ರಿಯಿಸಿ (+)