ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಶ್ಲೀಲ ಪೋಸ್ಟ್‌: ಮಹಿಳೆ ಬಂಧನ

Last Updated 17 ಅಕ್ಟೋಬರ್ 2018, 19:09 IST
ಅಕ್ಷರ ಗಾತ್ರ

ಬೆಂಗಳೂರು: ನಕಲಿ ಫೇಸ್‌ಬುಕ್‌ ಖಾತೆ ತೆರೆದು ಅಶ್ಲೀಲ ಫೋಸ್ಟ್‌ಗಳನ್ನು ಹಾಕುತ್ತಿದ್ದ ಆರೋಪದಡಿ ಪಾದರಾಯನಪುರದ ಆಯಿಷಾ ಸಿದ್ದಿಖಾ (23) ಎಂಬಾಕೆಯನ್ನು ಬುಧವಾರ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

‘ನನ್ನ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ವಿಡಿಯೊಗಳನ್ನು ಆಯಿಷಾ ಎಂಬುವವರು ಪೋಸ್ಟ್ ಮಾಡುತ್ತಿದ್ದಾರೆ’ ಎಂದು ವಿವಾಹಿತ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ್ದರು.

'‌ದೂರು ನೀಡಿದ ಮಹಿಳೆಯ ಗಂಡನ ಮೊದಲ ಪತ್ನಿ ಎಂಬುದಾಗಿ ಆರೋಪಿಯು ಒಪ್ಪಿಕೊಂಡಿದ್ದು, ಭಿನ್ನಾಭಿಪ್ರಾಯದಿಂದ ಕೃತ್ಯವೆಸಗಿದ್ದಾರೆ ಎಂಬುದು ವಿಚಾರಣೆಯಲ್ಲಿ ಗೊತ್ತಾಗಿದೆ' ಎಂದು ಪೊಲೀಸರು ಹೇಳಿದರು. ಆರೋಪಿಯ ಮೊಬೈಲ್ ಫೋನ್‍ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT