ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ಬೆಂಗಳೂರು ಚಲೋ

7

ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ಬೆಂಗಳೂರು ಚಲೋ

Published:
Updated:

ಹುಬ್ಬಳ್ಳಿ:  ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ಹಾಗೂ ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಮಲಪ್ರಭ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ ‘ಬೆಂಗಳೂರು ಚಲೋ’ ಹೋರಾಟಕ್ಕೆ ಹುಬ್ಬಳ್ಳಿಯಲ್ಲಿ ಮಂಗಳವಾರ ಚಾಲನೆ ನೀಡಿತು.

ಬೆಂಗಳೂರಿಗೆ ಹೊರಡುವ ಮುನ್ನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸೇರಿದ್ದ ರೈತರು ಸಂಕಷ್ಟದಲ್ಲಿರುವ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ಅನ್ನದಾತರಲ್ಲಿ ಭೇದ– ಭಾವ ಮಾಡಬಾರದು. ಬೆಳೆ ವಿಮೆಯನ್ನು ಪಾವತಿ ಮಾಡಲು ಕ್ರಮ ಕೈಗೊಳ್ಳಬೇಕು. ಮಹದಾಯಿ ಹೋರಾಟ ಆರಂಭವಾಗಿ ಸಾವಿರ ದಿನಗಳೇ ಕಳೆದಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿವಾದ ಇತ್ಯರ್ಥಪಡಿಸಿ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ರೈತ ಮುಖಂಡ ಸುಭಾಷ್‌ಚಂದ್ರ ಪಾಟೀಲ್ ಮಾತನಾಡಿ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚುನಾವಣೆಗೂ ಮೊದಲು ನೀಡಿದ ಮಾತಿನಂತೆ ಹಾಗೂ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ಈಗ ಸುಸ್ತಿದಾರರ ಸಾಲ ಮನ್ನಾ ಎಂದು ಘೋಷಣೆ ಮಾಡಿರುವುದು ಸರಿಯಲ್ಲ. ಎಲ್ಲ ರೈತರ ಎಲ್ಲ ರೀತಿಯ ಸಾಲಗಳೂ ಮನ್ನಾ ಆಗಬೇಕು ಎಂದರು.

ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸಬೇಕು ಹಾಗೂ ಈ ಭಾಗಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ರೈತರ ಮೇಲಿನ ಎಲ್ಲ ಪ್ರಕರಣಗಳನ್ನು ವಾಪಸ್ ಪಡೆಯಬೇಕು. ಮಹದಾಯಿ ಯೋಜನೆ ಜಾರಿಗೆ ಇರುವ ಅಡೆತಡೆಗಳನ್ನು ನಿವಾರಿಸಲು ಮುಖ್ಯಮಂತ್ರಿ ಸರ್ವ ಪಕ್ಷಗಳ ಸಭೆ ಕರೆಯಬೇಕು. ಪ್ರಧಾನಿ ಅವರು ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !