ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮಠದ ಹೆಸರಿನಲ್ಲಿ ಮತ ಯಾಚನೆ ಆರೋಪ
Last Updated 22 ಏಪ್ರಿಲ್ 2019, 19:49 IST
ಅಕ್ಷರ ಗಾತ್ರ

ಸಾಗರ: ಈಡಿಗ ಸಮುದಾಯಕ್ಕೆ ಸೇರಿದ ಮಠದ ಹೆಸರಿನಲ್ಲಿ ಮತ ಯಾಚಿಸಲಾಗುತ್ತಿದೆ ಎನ್ನುವ ವಿಷಯದ ಹಿನ್ನೆಲೆಯಲ್ಲಿ ತಾಲ್ಲೂಕಿನ ನೆಲ್ಲಿಬೀಡು ಸಮೀಪದ ಕಬದೂರು ಗ್ರಾಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

ಕೆಲವು ದಿನಗಳಿಂದ ಈಡಿಗ ಸಮುದಾಯದ ಮಠವೊಂದರ ಸಿಬ್ಬಂದಿ ನೆಲ್ಲಿಬೀಡು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಮಠಕ್ಕಾಗಿ ಹೊರೆಕಾಣಿಕೆ ಸಂಗ್ರಹಿಸುತ್ತಿದ್ದರು ಎನ್ನಲಾಗಿದೆ. ಈ ಪೈಕಿ ಮಠದ ಸಿಬ್ಬಂದಿಯೊಬ್ಬರು ಜೆಡಿಎಸ್–ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಪರ ಮತ ಯಾಚನೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಶಾಸಕ ಹಾಲಪ್ಪ ಅವರಲ್ಲಿ ದೂರಿದ್ದಾರೆ.

ಹಾಲಪ್ಪ ಅವರು ಕಬದೂರು ಗ್ರಾಮಕ್ಕೆ ತೆರಳಿದ್ದಾಗ ಮಠದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಡಿದ್ದಾರೆ. ಈ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಂಡ ಹಾಲಪ್ಪ ಬೆಂಬಲಿಗರು ಅವರ ಸಮ್ಮುಖದಲ್ಲೇ ಮಠದ ಸಿಬ್ಬಂದಿ ಗಣೇಶ್ ಅವರನ್ನು ತಳ್ಳಾಡಿ ಹಲ್ಲೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT