ಪಬ್‌, ರೆಸ್ಟೋರೆಂಟ್‌ಗಳ ವಿರುದ್ಧ ಎಫ್‌ಐಆರ್‌

ಮಂಗಳವಾರ, ಏಪ್ರಿಲ್ 23, 2019
27 °C
ಅಗ್ನಿ ಸುರಕ್ಷತಾ ಕ್ರಮ ಕೈಗೊಳ್ಳದ ಆರೋಪ * ಅಗ್ನಿಶಾಮಕ ಅಧಿಕಾರಿಗಳಿಂದ ದೂರು

ಪಬ್‌, ರೆಸ್ಟೋರೆಂಟ್‌ಗಳ ವಿರುದ್ಧ ಎಫ್‌ಐಆರ್‌

Published:
Updated:

ಬೆಂಗಳೂರು: ಅಗ್ನಿ ಸುರಕ್ಷತಾ ಕ್ರಮ ಕೈಗೊಳ್ಳದ ಆರೋಪದಡಿ ಇಂದಿರಾನಗರದಲ್ಲಿರುವ 8 ಪಬ್‌ ಹಾಗೂ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕಳೆದ ವರ್ಷ ಮುಂಬೈನ ಪಬ್‌ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಿಂದ ಎಚ್ಚೆತ್ತಿದ್ದ ಅಗ್ನಿಶಾಮಕ ದಳದ ಅಧಿಕಾರಿ ಗಳು, ಅಗ್ನಿ ಸುರಕ್ಷತಾ ಕ್ರಮ ಕೈಗೊಳ್ಳದ ಪಬ್‌ ಹಾಗೂ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳನ್ನು ಪತ್ತೆ ಹಚ್ಚಿ ನೋಟಿಸ್‌ ನೀಡಿದ್ದರು. ಅಷ್ಟಾದರೂ ಮಾಲೀಕರು, ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡಿರಲಿಲ್ಲ. ಅದೇ ಕಾರಣಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು, ‘ರಾಷ್ಟ್ರೀಯ ಕಟ್ಟಡ ನೀತಿ’ಯ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ಪಬ್‌ ಹಾಗೂ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಅದರನ್ವಯ ಇಂದಿರಾನಗರ ಹಾಗೂ ಜೀವನ್‌ಬಿಮಾ ನಗರ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

‘ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಕಾಲಾವಕಾಶ ನೀಡಿ ನೋಟಿಸ್‌ ನೀಡಲಾಗಿತ್ತು. ಅಷ್ಟಾ ದರೂ ಮಾಲೀಕರು ಎಚ್ಚೆತ್ತು
ಕೊಂಡಿಲ್ಲ. ಎಲ್ಲ ಕಟ್ಟಡಗಳು 15 ಮೀಟರ್‌ಗಿಂತ ಎತ್ತರವಾಗಿದ್ದು, ಅಲ್ಲಿ ಯಾವುದೇ ಅಗ್ನಿಶಮನ ಮುನ್ನೆಚ್ಚರಿಕಾ ಕ್ರಮಗಳಿಲ್ಲ. ಈ ಕಟ್ಟಡಗಳಿಗೆ ನಿತ್ಯವೂ ನೂರಾರು ಜನ ಬಂದು ಹೋಗುತ್ತಾರೆ. ಅಗ್ನಿ ಅವಘಡಗಳು ಸಂಭವಿಸಿದರೆ ಪ್ರಾಣ ಹಾನಿ ಹಾಗೂ ಆಸ್ತಿ ಹಾನಿಯಾಗುವ ಸಂಭವ ಇದೆ’ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !