ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಬೆಂಕಿ

Last Updated 27 ಏಪ್ರಿಲ್ 2019, 19:59 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ರೈಲಿನ(76508) ಎಂಜಿನ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರಲ್ಲಿ ಕೆಲಕಾಲ ಆತಂಕ ಮೂಡಿಸಿದ ಘಟನೆ ನಡೆದಿದ್ದು, ರೈಲಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ.

ಕೋಲಾರದಿಂದ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದ ಕಡೆಗೆ ರೈಲು ಬರುತ್ತಿತ್ತು. ಈ ವೇಳೆಯಲ್ಲಿ ವೈಟ್‌ಫೀಲ್ಡ್‌ನ ಹೂಡಿ ರೈಲ್ವೆ ನಿಲ್ದಾಣದ ಬಳಿ ಸಂಜೆ 5.45ರ ಸುಮಾರಿಗೆ 11ನೇ ಕೋಚ್‌ನಲ್ಲಿ ಹೊಗೆ ಕಾಣಿಸಿಕೊಂಡಿತ್ತು.

ರೈಲಿನಲ್ಲಿ ಹೊಗೆ ಕಾಣಿಸಿಕೊಂಡಿದ್ದನ್ನು ಕಂಡು ಪ್ರಯಾಣಿಕರುಆತಂಕಗೊಂಡರು. ಕೂಡಲೇ ಎಚ್ಚೆತ್ತುಕೊಂಡ ಚಾಲಕ ಹೂಡಿ ರೈಲು ನಿಲ್ಲಿಸಿ ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ಮುಟ್ಟಿಸಿದರು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT