ಸೋಮವಾರ, ಜೂನ್ 1, 2020
27 °C

ಜಿಲ್ಲಾಡಳಿತ ವತಿಯಿಂದ ಅಗತ್ಯ ಸಾಮಾಗ್ರಿ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿದ್ದಾಪುರ: ಹಾಲುಗುಂದ ಗ್ರಾ.ಪಂ ವ್ಯಾಪ್ತಿಯ ಕೊಂಡಂಗೇರಿಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಪತ್ತೆ ಬೆನ್ನಲ್ಲೇ, ಗ್ರಾಮದಲ್ಲಿ ಕಟ್ಟೆಚ್ಚರ ವಹಿಸಿದ್ದು, ನಿರ್ಬಂಧ ವಲಯದಲ್ಲಿರುವ 800 ಕುಟುಂಬಗಳಿಗೆ ಜಿಲ್ಲಾಡಳಿತದ ವತಿಯಿಂದ ಅಗತ್ಯ ಸಾಮಾಗ್ರಿಗಳನ್ನು ವಿತರಿಸಲಾಯಿತ್ತು.

ಜಿಲ್ಲಾಡಳಿತದ ವತಿಯಿಂದ ಗುರುವಾರದಂದು ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಎಂ.ಎಲ್.ಹರೀಶ್ ಹಾಗೂ ಗ್ರಾಮ ಲೆಕ್ಕಿಗ ಓಮಪ್ಪ ಬಣಾಕರ್‌ ಹಾಗೂ ಕಂದಾಯ ಇಲಾಖೆ ಸಿಬ್ಬಂದಿಗಳು 800ಕ್ಕೂ ಅಧಿಕ ಮನೆಗಳಿಗೆ ಅಕ್ಕಿ ,ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿದರು.

ಹಾಲುಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಮುಖ ರಸ್ತೆಗಳಲ್ಲಿ ಸಿದ್ದಾಪುರ ಠಾಣಾಧಿಕಾರಿ ಬೋಜಪ್ಪ ನೇತೃತ್ವದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮುಂದುವರಿಸಲಾಗಿದೆ.

ವಿರಾಜಪೇಟೆ ತಾಲ್ಲೂಕು ಆರೋಗ್ಯ ಇಲಾಖಾಧಿಕಾರಿ ಡಾ.ಯತೀರಾಜ್ ರವರ ನೇತೃತ್ವದಲ್ಲಿ ಆರೋಗ್ಯ ಸಿಬ್ಬಂದಿಗಳು ಕೊಂಡಂಗೇರಿಯ ನಿರ್ಬಂಧಿತ ಪ್ರದೇಶದಲ್ಲಿರುವ ಮನೆಗಳಿಗೆ ತೆರಳಿ ದಿನನಿತ್ಯ ತಪಾಸಣೆ ಮಾಡುತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.