ಗೌರಿ ಹತ್ಯೆ: ಜಾಮೀನು ಕೋರಿ ಹೈಕೋರ್ಟ್‌ಗೆ ಮೊರೆ

7

ಗೌರಿ ಹತ್ಯೆ: ಜಾಮೀನು ಕೋರಿ ಹೈಕೋರ್ಟ್‌ಗೆ ಮೊರೆ

Published:
Updated:
Deccan Herald

ಬೆಂಗಳೂರು: ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಎಂಟನೇ ಆರೋಪಿ ಎನ್‌. ಮೋಹನ್ ನಾಯಕ್‌ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಈ ಕುರಿತ ಅರ್ಜಿ ನ್ಯಾಯಮೂರ್ತಿ ಕೆ. ಎಸ್‌.ಮುದಗಲ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಾಗ, ಪ್ರಾಸಿಕ್ಯೂಷನ್‌ ಪರವಾಗಿ ರಾಜ್ಯ ಪಬ್ಲಿಕ್‌ ಪ್ರಾಸಿಕ್ಯೂಟರ್ ನಮಿತಾ ಕಲ್ಲೇಶ್‌ ಮತ್ತು ವಿಚಾರಣಾ ನ್ಯಾಯಾಲಯದ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಎಸ್‌.ಬಾಲನ್‌ ಇಬ್ಬರೂ ಹಾಜರಾದರು.

ಇದಕ್ಕೆ ನ್ಯಾಯಪೀಠ, ‘ಇಬ್ಬರಲ್ಲಿ ಯಾರು ಹಾಜರಾಗುತ್ತೀರಿ ಎಂಬ ಬಗ್ಗೆ ಮೆಮೊ (ಜ್ಞಾಪನಾ ಪತ್ರ) ಸಲ್ಲಿಸಿ’ ಎಂದು ವಿಚಾರಣೆಯನ್ನು ಇದೇ 17ಕ್ಕೆ ಮುಂದೂಡಿತು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಸಂಪಾಜೆ ನಿವಾಸಿಯಾದ ಎನ್‌.ಮೋಹನ್‌ ನಾಯಕ್‌ಗೆ ವಿಚಾರಣಾ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

ಬರಹ ಇಷ್ಟವಾಯಿತೆ?

 • 6

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !