ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕು ದಿನಗಳ ಕೃಷಿ ಮೇಳ ಆರಂಭ

Last Updated 14 ನವೆಂಬರ್ 2018, 19:03 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ಗುರುವಾರದಿಂದ ನಾಲ್ಕು ದಿನಗಳವರೆಗೆ ಕೃಷಿ ಮೇಳ ಆಯೋಜಿಸಲಾಗಿದೆ. ರಾಜ್ಯಪಾಲ ವಜುಭಾಯಿ ವಾಲಾ ಬೆಳಿಗ್ಗೆ 11 ಗಂಟೆಗೆ ಈ ಕೃಷಿ ಹಬ್ಬವನ್ನು ಉದ್ಘಾಟಿಸಲಿದ್ದಾರೆ.

ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳು, ಭಾರತೀಯ ಕೃಷಿ ಅನುಸಂಧಾನ ಪರಿಷತ್‌ನ ಅಂಗಸಂಸ್ಥೆಗಳು, ಹಣಕಾಸು ಸಂಸ್ಥೆಗಳು, ಸ್ವಯಂಸೇವಾ ಸಂಸ್ಥೆಗಳು, ಸ್ವ–ಸಹಾಯ ಸಂಘಗಳು, ಕರ್ನಾಟಕ ಹಾಲು ಮಹಾಮಂಡಳಿ ಹಾಗೂ ರೈತರ ಸಂಘ–ಸಂಸ್ಥೆಗಳ ಪ್ರತಿನಿಧಿಗಳು ಮೇಳದಲ್ಲಿ ಭಾಗವಹಿಸಲಿದ್ದಾರೆ.

ಈ ಬಾರಿ ಸುಮಾರು 650 ಮಳಿಗೆಗಳ ವ್ಯವಸ್ಥೆ ಮಾಡಲಾಗಿದೆ. ಕೃಷಿ ಸಲಕರಣೆ ಮತ್ತು ಯಂತ್ರೋಪಕರಣಗಳು, ಕೂರಿಗೆ, ಕಬ್ಬು ನಾಟಿ ಮಾಡುವ ಯಂತ್ರ, ಯಂತ್ರಚಾಲಿತ ಒಕ್ಕಣೆ, ಸೌರ ಪಂಪ್‌ಸೆಟ್‌, ಮರಗಳಲ್ಲಿನ ಕಾಯಿ ಕೀಳುವ ಸಾಧನಗಳ ಪ್ರದರ್ಶನವೂ ಇರಲಿದೆ. ಕುರಿ, ಮೇಕೆ, ಕೋಳಿ, ಹಂದಿ ಮತ್ತು ಮೊಲದ ವಿವಿಧ ತಳಿಗಳನ್ನು ಕಾಣಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT