ಕಾಲೇಜುಗಳಿಗೆ ಸೌಲಭ್ಯ ₹5.76 ಕೋಟಿ ಅನುದಾನ

7

ಕಾಲೇಜುಗಳಿಗೆ ಸೌಲಭ್ಯ ₹5.76 ಕೋಟಿ ಅನುದಾನ

Published:
Updated:

ಬೆಂಗಳೂರು: ರಾಜ್ಯದ 52 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಹೆಚ್ಚುವರಿ ಕೊಠಡಿ, ಪ್ರಯೋಗಾಲಯ ಕೊಠಡಿ ಮತ್ತು ಶೌಚಾಲಯಗಳ ನಿರ್ಮಾಣಕ್ಕೆ ₹5.76 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ.

ನಬಾರ್ಡ್‌ ಸಹಯೋಗದಲ್ಲಿ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಧಿ (ಆರ್‌ಐಡಿಎಫ್) ಯೋಜನೆಯಡಿ ಅನುದಾನ ಬಿಡುಗಡೆಯಾಗಿದೆ.

ನಬಾರ್ಡ್‌ ಅನುಮೋದಿತ 52 ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮತಿ ನೀಡಿದ್ದು, ಅನುದಾನವನ್ನು ಸರಿಯಾದ ಪ್ರಮಾಣದಲ್ಲಿ ಬಳಕೆ ಮಾಡದಿದ್ದಲ್ಲಿ ಆಯಾ ಕಾರ್ಯಪಾಲಕ ಎಂಜಿನಿಯರ್‌ಗಳೇ ಹೊಣೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !