ಶಿವಾಜಿ ಜಯಂತಿ ಗಲಭೆ ಪ್ರಕರಣ ವಾಪಸ್ ಪಡೆಯಲು ನಿರ್ಧಾರ

7

ಶಿವಾಜಿ ಜಯಂತಿ ಗಲಭೆ ಪ್ರಕರಣ ವಾಪಸ್ ಪಡೆಯಲು ನಿರ್ಧಾರ

Published:
Updated:

ಹುಬ್ಬಳ್ಳಿ: ಶಿವಾಜಿ ಜಯಂತಿ ಮರವಣಿಗೆ ವೇಳೆ ನಡೆದಿದ್ದ ಗಲಭೆ ಪ್ರಕರಣವನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧರಿಸಿದೆ. ಪ್ರಾಸಿಕ್ಯೂಷನ್ ಇಲಾಖೆಯ ನಿರ್ದೇಶನದಂತೆ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಇದಾ ಗೋವಿಂದಮ್ಮ ಬಾಲಯ್ಯ ಅವರು ಎರಡನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಮೆರವಣಿಗೆಯ ವೇಳೆ ಕಲ್ಲು ತೂರಾಟ ಆಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದಾಗ ಗಲಭೆಯಾಗಿದೆ. ಪ್ರಕರಣದ 56 ಮಂದಿ ಆರೋಪಿಗಳು ವೈಯಕ್ತಿಕ ಲಾಭಕ್ಕಾಗಿ ಗಲಭೆಯಲ್ಲಿ ಪಾಲ್ಗೊಂಡಿಲ್ಲ ಎಂಬ ಅಭಿಪ್ರಾಯವನ್ನು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

2013ಏಪ್ರಿಲ್ 12ರಂದು ಶಿವಾಜಿ ಜಯಂತಿ ಮೆರವಣಿಗೆ ವೇಳೆ ಗಲಭೆಯಾಗಿ ಕೆಲವರು ಗಾಯಗೊಂಡಿದ್ದರು. ಪೊಲೀಸರ ಕರ್ತವ್ಯಕ್ಕೆ ಸಹ ಅಡ್ಡಿಪಡಿಸಲಾಗಿತ್ತು. ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹುಬ್ಬಳ್ಳಿಯ ಗಣೇಶ್ ಮಿಸ್ಕಿನ್ ಮತ್ತು ಅಮಿತ್ ಬದ್ದಿ ಸಹ ಈ ಪ್ರಕರಣದ ಆರೋಪಿಗಳಾಗಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !