ಯುಜಿಸಿ ವೇತನಕ್ಕೆ ಆಗ್ರಹ

ಗುರುವಾರ , ಮಾರ್ಚ್ 21, 2019
27 °C

ಯುಜಿಸಿ ವೇತನಕ್ಕೆ ಆಗ್ರಹ

Published:
Updated:

ಬೆಂಗಳೂರು: ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟವು ಯುಜಿಸಿ ನಿಯಮದಂತೆ ವೇತನ ನೀಡಬೇಕು ಎಂದು ಒತ್ತಾಯಿಸಿ ಇದೇ 11ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಆರ್‌.ಡಿ.ಚಲವಾದಿ,‘ ಅತಿಥಿ ಉಪನ್ಯಾಸಕರಿಗೆ ಸರ್ಕಾರ ತಿಂಗಳಿಗೆ ₹13,000 ಮತ್ತು ₹11,000 ಸಂಬಳ ನೀಡುತ್ತದೆ. ಅದನ್ನು ಸಹ ಆರು ತಿಂಗಳಿಗೊಮ್ಮೆ ಪಾವತಿಸುತ್ತದೆ. ಜೀವನ ನಿರ್ವಹಣೆ ಕಷ್ಟವಾಗಿದೆ’ ಎಂದು ಹೇಳಿದರು.

‘ಹಲವು ವರ್ಷಗಳಿಂದ ಹೋರಾಟ ಮಾಡುತ್ತ ಬಂದಿದ್ದೇವೆ. ಸರ್ಕಾರ ಗಮನಹರಿಸುತ್ತಿಲ್ಲ. ಅದಕ್ಕಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಮುಂದೆಯೂ ಸರ್ಕಾರದ ನಿರ್ಲಕ್ಷ್ಯ ಧೋರಣೆ ಮುಂದುವರಿದರೆ, ತರಗತಿ ಬಹಿಷ್ಕರಿಸಲಿದ್ದೇವೆ. ಮೌಲ್ಯಮಾಪನ ಕಾರ್ಯಕ್ಕೂ ತೆರಳುವುದಿಲ್ಲ’ ಎಂದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !