ಶುಕ್ರವಾರ, ಏಪ್ರಿಲ್ 10, 2020
19 °C
ಕುರುಬ ಸಮುದಾಯದ ಮುಖಂಡರಿಗೆ ಟಿಕೆಟ್ ನೀಡಿ: ಹಾಲುಮತ ಮಹಾಸಭಾ

ಬೇಡಿಕೆಗೆ ಸ್ಪಂದಿಸದಿದ್ದರೆ ಪಕ್ಷೇತರರಾಗಿ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯಿಂದ ಕುರುಬ ಸಮುದಾಯದ ಒಬ್ಬರಿಗೆ ಟಿಕೆಟ್ ನೀಡಬೇಕು ಎಂದು ಹಾಲುಮತ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ರುದ್ರಣ್ಣ ಗುಳಗುಳಿ ಆಗ್ರಹಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಮುಖಂಡರಾದ ಬಸವರಾಜ ಗುರಿಕಾರ, ರವಿ ದಂಡಿನ ಅಥವಾ ಭೋಜರಾಜ ಕರುದಿ ಅವರಲ್ಲಿ ಒಬ್ಬರಿಗೆ ಟಿಕೆಟ್ ನೀಡಬೇಕು. ಒಂದು ವೇಳೆ ಬೇಡಿಕೆಗೆ ಸ್ಪಂದಿಸದಿದ್ದರೆ ಸಮುದಾಯದ ಒಬ್ಬರು ಪಕ್ಷೇತರರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಅವರು ಹೇಳಿದರು.

ಸಮಾಜದ ಸಹಕಾದಿಂದಲೇ ರಾಜ್ಯದಲ್ಲಿ ಎರಡು ಬಾರಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಆದರೆ ಬಿಜೆಪಿ ಈ ಸಮಾಜಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಸಮಾಜದ ಒಬ್ಬರಿಗೂ ಟಿಕೆಟ್ ನೀಡಲಿಲ್ಲ. ಈ ಬಾರಿ ವಿಧಾನಪರಿಷತ್ ಚುನಾವಣೆಯಲ್ಲಿ ಆದ್ಯತೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಹಾಲುಮತ ಸಮಾಜದ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಪ್ರಲ್ಹಾದ ಹೊಸಹಳ್ಳಿ, ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ದ್ಯಾವಪ್ಪ ಐರಣಿ, ಸಂಚಾಲಕ ಪ್ರದಾಶ್ ಹುದ್ಲಮನಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)