ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಸಮತೋಲನಕ್ಕೆ ಕ್ರೀಡೆ ಅಗತ್ಯ

ಅಗಲಗುರ್ಕಿ ಬಿಜಿಎಸ್ ಆಂಗ್ಲ ಶಾಲೆಯಲ್ಲಿ ‘ದೀಕ್ಷಾ’ ಕಾರ್ಯಕ್ರಮ ಮತ್ತು ಇಂಟರ್ ಹೌಸ್ ಕ್ರೀಡಾಕೂಟ
Last Updated 6 ಜುಲೈ 2018, 14:41 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ, ಮಾನಸಿಕವಾಗಿ ಆರೋಗ್ಯ ಪಡೆಯಲು ಸಾಧ್ಯವಾಗುತ್ತದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಣ್ಣರೆಡ್ಡಿ ತಿಳಿಸಿದರು.

ನಗರ ಹೊರವಲಯದ ಅಗಲಗುರ್ಕಿ ಬಿಜಿಎಸ್ ಆಂಗ್ಲ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ದೀಕ್ಷಾ’ ಕಾರ್ಯಕ್ರಮ ಮತ್ತು ಇಂಟರ್ ಹೌಸ್ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

‘ಮನುಷ್ಯನ ದೇಹ ಮತ್ತು ಮನಸ್ಸಿನ ಸಮತೋಲನ ಸಾಧಿಸುವಲ್ಲಿ ಕ್ರೀಡೆಯ ಪ್ರಾಮುಖ್ಯ ಬಹಳಷ್ಟಿದೆ. ಪೋಷಕರು ಮಕ್ಕಳನ್ನು ಚಿಕ್ಕಂದಿನಲ್ಲೇ ಕ್ರೀಡೆಗಳಲ್ಲಿ ಸಕ್ರಿಯವಾಗಿ ತೊಡಗಿಸಿದರೆ ಸದೃಢವಾದ ವ್ಯಕ್ತಿ ಮತ್ತು ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಏಕಾಗ್ರತೆ, ಶಿಸ್ತು, ಸಮಯ ಪ್ರಜ್ಞೆ ಅಳವಡಿಸಿಕೊಂಡಾಗ ಮಾತ್ರ ಭವಿಷ್ಯದ ಜೀವನದ ಯಶಸ್ವಿಯಾಗುತ್ತದೆ’ ಎಂದು ಹೇಳಿದರು.

‘ಕ್ರೀಡೆಯಲ್ಲಿ ಎಲ್ಲರೂ ಗೆಲ್ಲಲ್ಲು ಸಾಧ್ಯವಿಲ್ಲ. ಸೋಲು ಯಾವುದೇ ಕಾರಣಕ್ಕೂ ನಿರಾಶೆ ಉಂಟು ಮಾಡಬಾರದು. ಛಲವನ್ನು ಹುಟ್ಟಿಸಬೇಕು’ ಎಂದು ತಿಳಿಸಿದರು.

ಬಿಜಿಎಸ್‌ ಶಿಕ್ಷಣ ಸಂಸ್ಥೆ ಮುಖ್ಯ ಆಡಳಿತಾಧಿಕಾರಿ ಎನ್‌.ಶಿವರಾಂ ರೆಡ್ಡಿ ಮಾತನಾಡಿ, ‘ದೇಹ ಮತ್ತು ಮನಸ್ಸಿನ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುವ ಕ್ರೀಡೆಗಳನ್ನು ಪ್ರತಿಯೊಬ್ಬರು ಜೀವನದ ಭಾಗವಾಗಿ ಅಳವಡಿಸಿಕೊಳ್ಳಬೇಕು. ಪೋಷಕರು ತಮ್ಮ ಮಕ್ಕಳನ್ನು ಕ್ರೀಡೆ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು’ ಎಂದು ತಿಳಿಸಿದರು.

ನಂದಿ ಗ್ರಾಮಾಂತರ ಠಾಣೆಯ ಸಿಪಿಐ ಓಂ ಪ್ರಕಾಶ್‌ಗೌಡ ಮಾತನಾಡಿ, ‘ಮಕ್ಕಳಿಗೆ ಚಿಕ್ಕವಯಸ್ಸಿನಲ್ಲಿಯೇ ಕ್ರೀಡೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವುದರಿಂದ ಅವರು ರಾಜ್ಯ, ರಾಷ್ಟ್ರ , ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಹಕಾರಿಯಾಗಲಿದೆ’ ಎಂದರು.

ಕ್ರೀಡಾಕೂಟದಲ್ಲಿ ಗುಂಡು ಎಸೆತ, ಉದ್ದ ಜಿಗಿತ, ಎತ್ತರ ಜಿಗಿತ, ವಾಲಿಬಾಲ್, ಥ್ರೋಬಾಲ್ ಸೇರಿದಂತೆ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಪದಕಗಳನ್ನು ವಿತರಿಸಲಾಯಿತು. ಬಿಜಿಎಸ್‌ ಪಿ.ಯು ಕಾಲೇಜಿನ ಡೀನ್ ಮಧುಸೂಧನ್, ಪ್ರಾಂಶುಪಾಲ ಡಿ.ಸಿ.ಮೋಹನ್ ಕುಮಾರ್ ಇದ್ದರು.

**

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT