ಮನೆಯ ಮುಂದೆ ಶವ ಸಂಸ್ಕಾರ ಆರೋಪ: ಬಿಬಿಎಂಪಿಗೆ ನೋಟಿಸ್‌

ಬುಧವಾರ, ಮೇ 22, 2019
29 °C

ಮನೆಯ ಮುಂದೆ ಶವ ಸಂಸ್ಕಾರ ಆರೋಪ: ಬಿಬಿಎಂಪಿಗೆ ನೋಟಿಸ್‌

Published:
Updated:
Prajavani

ಬೆಂಗಳೂರು: ‘ಸಾರ್ವಜನಿಕ ರಸ್ತೆಯಲ್ಲಿ ಶವ ಸಂಸ್ಕಾರ ಮಾಡಲಾಗಿದೆ’ ಎಂದು ಆರೋಪಿಸಿ ಸಲ್ಲಿಸಲಾಗಿರುವ ರಿಟ್‌ ಅರ್ಜಿಗೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಚನ್ನಕೇಶವ ನಗರದ ಪರಪ್ಪನ ಅಗ್ರಹಾರ ರಸ್ತೆಯ ಮೊದಲ ತಿರುವಿನ ನಿವಾಸಿ ಜಿ.ನಾಗರಾಜ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿದ್ದು, ‘ಉಭಯ ಪಕ್ಷಗಾರರು ಮುಂದಿನ ವಿಚಾರಣೆವರೆಗೆ ಸ್ಥಳದಲ್ಲಿ ಯಥಾಸ್ಥಿತಿ ಕಾಯ್ದುಕೊಂಡು ಹೋಗಬೇಕು’ ಎಂದು ತಾಕೀತು ಮಾಡಿದೆ.

‘ಸಿಂಗಸಂದ್ರ ಗ್ರಾಮದ ಹೊಸೂರು ಮುಖ್ಯ ರಸ್ತೆಯ ನಿವಾಸಿ ಪಾಪ ರೆಡ್ಡಿ ಅವರು, ತಮ್ಮ ತಂದೆಯ ಶವವನ್ನು ನನ್ನ ಮನೆಯ ಪೂರ್ವ ಭಾಗಕ್ಕಿರುವ ಸಾರ್ವಜನಿಕ ರಸ್ತೆಯಲ್ಲಿ ಸಂಸ್ಕಾರ ಮಾಡಿದ್ದಾರೆ’ ಎಂಬುದು ಅರ್ಜಿದಾರರ ಆರೋಪ.

ಮಾಹಿತಿ ಪಡೆಯುತ್ತೇವೆ: ವಿಚಾರಣೆ ವೇಳೆ ನ್ಯಾಯಪೀಠಕ್ಕೆ ಉತ್ತರಿಸಿರುವ ಬಿಬಿಎಂಪಿ ಪರ ವಕೀಲರು, ‘ವಿವಾದಿತ ಸ್ಥಳ ಸಾರ್ವಜನಿಕ ಸ್ಥಳ ಹೌದೊ ಅಲ್ಲವೊ ಎಂಬುದರ ಮಾಹಿತಿ ಪಡೆದು ಮುಂದಿನ ವಿಚಾರಣೆ ದಿನದಂದು ತಿಳಿಸುತ್ತೇವೆ’ ಎಂದು ಹೇಳಿದ್ದಾರೆ.

ಇದೇ ವೇಳೆ ಬೆಂಗಳೂರು ದಕ್ಷಿಣ ತಹಶೀಲ್ದಾರ್ ಮತ್ತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್‌ ಅವರು, ‘ಸ್ಥಳದಲ್ಲಿ ಕಾನೂನು ಮತ್ತು ಶಾಂತಿಗೆ ಭಂಗ ಬರುವಂತಹ ಯಾವುದೇ ಸನ್ನಿವೇಶ ಇಲ್ಲ’ ಎಂದೂ ನ್ಯಾಯಪೀಠಕ್ಕೆ ವಿವರಿಸಿದ್ದಾರೆ.

ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಲಾಗಿದೆ. ಅರ್ಜಿದಾರರ ಪರ ಎಚ್‌.ಸುನಿಲ್ ಕುಮಾರ್ ವಾದ ಮಂಡಿಸಿದರು. ಪ್ರಕರಣದಲ್ಲಿ, ಬಿಬಿಎಂಪಿ ಆಯುಕ್ತರು, ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರು, ಬೆಂಗಳೂರು ನಗರ ಜಿಲ್ಲಾಧಿಕಾರಿ, ಬೆಂಗಳೂರು ದಕ್ಷಿಣ ತಹಶೀಲ್ದಾರ್, ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಮತ್ತು ಪಾಪ ರೆಡ್ಡಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !