ಎಸ್.ಮೂರ್ತಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಶನಿವಾರ, ಮಾರ್ಚ್ 23, 2019
24 °C

ಎಸ್.ಮೂರ್ತಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Published:
Updated:

ಬೆಂಗಳೂರು: ‘ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ನನ್ನನ್ನು ಅಮಾನತುಗೊಳಿಸಿ ವಿಧಾನಸಭೆ ವಿಶೇಷ ಮಂಡಳಿ ಹೊರಡಿಸಿರುವ ಆದೇಶ ರದ್ದುಪಡಿಸಬೇಕು’ ಎಂದು ಕೋರಿದ್ದ ಎಸ್.ಮೂರ್ತಿ ಅರ್ಜಿಗೆ ಸಂಬಂಧಿಸಿದಂತೆ ಮಧ್ಯಂತರ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.

ಈ ಕುರಿತು ಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು, ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಮುಕ್ತಾಯಗೊಳಿಸಿತು.

ಮೂರ್ತಿ ಪರ ಹಿರಿಯ ವಕೀಲ ಬಿ.ವಿ.ಆಚಾರ್ಯ ಮತ್ತು ಪ್ರತಿವಾದಿಗಳಾದ ವಿಧಾನಸಭಾಧ್ಯಕ್ಷರು, ವಿಧಾನಸಭೆಯ ಹಂಗಾಮಿ ಕಾರ್ಯದರ್ಶಿ ಮತ್ತು ಸಂಸದೀಯ ವಿಶೇಷ ಮಂಡಳಿ ಪರವಾಗಿ ಅಡ್ವೊಕೇಟ್ ಜನರಲ್ ಉದಯ ಹೊಳ್ಳ ವಾದ ಮಂಡಿಸಿದರು.

ಪ್ರಕರಣವೇನು?: ವಿಧಾನಸಭೆ ಕಾರ್ಯದರ್ಶಿಯಾಗಿದ್ದ ಎಸ್. ಮೂರ್ತಿಯವರನ್ನು ಸೇವೆಯಿಂದ ಅಮಾನತುಗೊಳಿಸಿ ವಿಧಾನಸಭೆ ಅಧೀನ ಕಾರ್ಯದರ್ಶಿ 2018ರ ಡಿಸೆಂಬರ್‌ 27ರಂದು ಆದೇಶ ಹೊರಡಿಸಿದ್ದರು.

‘2016 ಹಾಗೂ 2017ನೇ ಸಾಲಿನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಕಾಮಗಾರಿ ಹಾಗೂ ಇತರೆ ಖರ್ಚು ವೆಚ್ಚಗಳಲ್ಲಿ ಅವ್ಯವಹಾರ ನಡೆಸಲಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿರುವ ಶಾಸಕಾಂಗದ ವಿಶೇಷ ಮಂಡಳಿಯ ಆದೇಶದ ಅನುಸಾರ ಎಸ್.ಮೂರ್ತಿಯವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !