ಗುರುವಾರ , ಸೆಪ್ಟೆಂಬರ್ 19, 2019
26 °C

ಕೋಚಿಮುಲ್‌ ಚುನಾವಣೆ: ತಡೆಗೆ ನಕಾರ

Published:
Updated:
Prajavani

ಬೆಂಗಳೂರು: ಇದೇ 13ರಂದು ನಡೆಯಲಿರುವ ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಕೋಚಿಮುಲ್) ಚುನಾವಣೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಈ ಸಂಬಂಧ ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕಿನ ಬೇತಮಂಗಲದ ಎ.ಎಂ.ಲಕ್ಷ್ಮೀನಾರಾಯಣ ಹಾಗೂ ಅಣ್ಣಿಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಂ. ನಾಗರಾಜು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ರಜಾಕಾಲದ ವಿಶೇಷ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.

‘ಈಗಾಗಲೇ ಚುನಾವಣೆ ವೇಳಾಪಟ್ಟಿ ಘೋಷಣೆಯಾಗಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೂ ಮುಗಿದಿದೆ. ಆದ್ದರಿಂದ ಈ ಹಂತದಲ್ಲಿ ಚುನಾವಣೆಗೆ ತಡೆ ನೀಡಲು ಸಾಧ್ಯವಿಲ್ಲ’ ಎಂದು ಮನವಿ ತಿರಸ್ಕರಿಸಿತು.

ಹಾಲು ಉತ್ಪಾದಕರ ಸಹಕಾರ ಸಂಘಗಳ ಸಂಖ್ಯೆಗೆ ಅನುಗುಣವಾಗಿ ಕೋಚಿಮುಲ್ ಆಡಳಿತ ಮಂಡಳಿಯಲ್ಲಿ ನಿರ್ದೇಶಕರ ಸ್ಥಾನ ಕಲ್ಪಿಸದೆ ಚುನಾವಣೆ ನಡೆಸುತ್ತಿರುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು.

ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

Post Comments (+)