ಸನೋಫಿ ಕಂಪನಿ ಸಲ್ಲಿಸಿದ್ದ ಅರ್ಜಿ ವಜಾ

ಭಾನುವಾರ, ಮೇ 26, 2019
32 °C

ಸನೋಫಿ ಕಂಪನಿ ಸಲ್ಲಿಸಿದ್ದ ಅರ್ಜಿ ವಜಾ

Published:
Updated:

ಬೆಂಗಳೂರು: ಮೈಸೂರಿನ ಮೆಸರ್ಸ್ ಬಾಬಾ ಅಣುಶಕ್ತಿ ಸಂಶೋಧನಾ ಕೇಂದ್ರಕ್ಕೆ (ಬಾರ್ಕ್) ಔಷಧ ಪೂರೈಸುವ ಟೆಂಡರ್ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪದಲ್ಲಿ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣ ರದ್ದು ಕೋರಿ ಮುಂಬೈನ ಸನೋಫಿ ಇಂಡಿಯಾ ಲಿಮಿಟೆಡ್ ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಸನೋಫಿ ಕಂಪನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಪೀಠ, ಶುಕ್ರವಾರ ಪ್ರಕಟಿಸಿತು.

ಪ್ರಕರಣದ ಸಂಬಂಧ ಸಿಬಿಐ ಪರ ವಾದ ಮಂಡಿಸಿದ್ದ ವಕೀಲ ಪಿ.ಪ್ರಸನ್ನ ಕುಮಾರ್, ‘ಬಾಬಾ ಅಣುಶಕ್ತಿ ಸಂಶೋಧನಾ ಕೇಂದ್ರವು ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾಗಿದೆ. ಇಂಥ ಸಂಸ್ಥೆಗಳಲ್ಲೇ ಭ್ರಷ್ಟಾಚಾರದ ಆರೋಪ ಕೇಳಿಬಂದಿರುವುದು ಸಹನೀಯವಲ್ಲ. ಇದನ್ನು ಹೀಗೇ ಬಿಟ್ಟರೆ, ದೇಶದ ಭದ್ರತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ಪ್ರಕರಣದ ಸಂಬಂಧ ತನಿಖೆ ಪೂರ್ಣಗೊಳಿಸಿರುವ ಸಿಬಿಐ, ಈಗಾಗಲೇ ವಿಚಾರಣಾಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಿದೆ. ಇದೀಗ ಅರ್ಜಿದಾರರು ಸಿಬಿಐ ವಿಶೇಷ ನ್ಯಾಯಾಲಯದ ವಿಚಾರಣೆ ಎದುರಿಸಬೇಕಿದ್ದು, ಈ ಹಂತದಲ್ಲಿ ಪ್ರಕರಣ ರದ್ದುಪಡಿಸಬಾರದು’ ಎಂದು ಮನವಿ ಮಾಡಿದ್ದರು.

ಇದನ್ನು ಪರಿಗಣಿಸಿರುವ ನ್ಯಾಯಪೀಠ, ಅರ್ಜಿ ವಜಾಗೊಳಿಸಿದೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !