ಭಾನುವಾರ, ಸೆಪ್ಟೆಂಬರ್ 22, 2019
22 °C

ಮೆಕ್ಕಾಗೆ ತೆರಳಲು ನಲಪಾಡ್‌ಗೆ ಹೈಕೋರ್ಟ್ ಅನುಮತಿ

Published:
Updated:

ಬೆಂಗಳೂರು: ಉದ್ಯಮಿ ಲೋಕನಾಥ್‌ ಪುತ್ರ ವಿದ್ವತ್‌ ಮೇಲಿನ ಹಲ್ಲೆ ಪ್ರಕರಣದ ಪ್ರಮುಖ ಆರೋಪಿ ಮೊಹಮದ್ ನಲಪಾಡ್, ಮೆಕ್ಕಾಗೆ ತೆರಳಲು ಹೈಕೋರ್ಟ್ ಅನುಮತಿ ನೀಡಿದೆ.

ಈ ಕುರಿತಂತೆ ನಲಪಾಡ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಅರ್ಜಿದಾರರ ಕೋರಿಕೆಯಂತೆ ಇದೇ 15 ರಿಂದ ಜೂನ್ 6ರವರೆಗೆ ಮೆಕ್ಕಾಗೆ ತೆರಳಲು ನ್ಯಾಯಪೀಠ ಅನುಮತಿ ನೀಡಿತು.

2018ರ ಫೆಬ್ರುವರಿ 17ರಂದು ರಾತ್ರಿ ಮೊಹಮದ್ ನಲಪಾಡ್ ಮತ್ತು ಅವರ ಸಹಚರರು ನಗರದ ಫರ್ಜಿ ಕಫೆಯಲ್ಲಿ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ.

Post Comments (+)