ಮಂಗಳವಾರ, ಮೇ 24, 2022
31 °C

‘ಹಿಟ್ಲರ್‌ ಮಗ ಮೋದಿ’ ಎಂದ ಕಾಂಗ್ರೆಸ್‌: ಬಿಜೆಪಿ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪ್ರಧಾನಿ ನರೇಂದ್ರಮೋದಿ ಅವರ ಚಿತ್ರವನ್ನು ಹಿಟ್ಲರ್‌ ಹೋಲಿಕೆ ಬರುವಂತೆ ಫೋಟೊಶಾಪ್‌ ಮಾಡಿ, ಹಿಟ್ಲರ್‌ ಮಗ ಮೋದಿ ಎಂಬ ತಲೆಬರಹ ನೀಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿರುವ ಕಾಂಗ್ರೆಸ್‌ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಶ್ರೀವತ್ಸ ಅವರನ್ನು ಬಂಧಿಸಬೇಕು ಎಂದು ಪೊಲೀಸರಿಗೆ ಬಿಜೆಪಿ ದೂರು ಸಲ್ಲಿಸಿದೆ.

ಈ ಸಂಬಂಧ ಮಲ್ಲೇಶ್ವರ ಪೊಲೀಸ್‌ ಠಾಣೆಗೆ ಬಿಜೆಪಿ ದೂರು ಸಲ್ಲಿಸಿದೆ. ಶ್ರೀವತ್ಸ ತಮ್ಮ ಅಧಿಕೃತ ಟ್ವಿಟರ್‌ ಅಕೌಂಟ್‌ನಲ್ಲಿ ಮೋದಿ ಅವರ ಭಾವಚಿತ್ರವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಬಿಜೆಪಿ ದೂರಿದೆ.

‘ಚೌಕಿದಾರ್‌ ಚೋರ್‌ ಹೈ‘ ಎಂದು ಸುಪ್ರೀಂ ಕೋರ್ಟ್‌ ಹೇಳಿರುವುದಾಗಿ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ರಾಹುಲ್‌ಗಾಂಧಿ ಸುಳ್ಳು ನುಡಿದು ಬಳಿಕ ಕ್ಷಮೆ ಯಾಚಿಸಿದರು. ಈಗ ಕಾಂಗ್ರೆಸ್‌ ಪಕ್ಷ ತಿರುಚಿದ ಚಿತ್ರ ಪೋಸ್ಟ್‌ ಮಾಡಿರುವುದೂ ಅಪರಾಧವಾಗುತ್ತದೆ. ಶ್ರೀವತ್ಸ ತಮ್ಮ ಪ್ರೊಫೈಲ್‌ನಲ್ಲಿ ಕಾಂಗ್ರೆಸ್‌ ಪಕ್ಷದ ಪ್ರಚಾರದ ಉಸ್ತುವಾರಿ ಎಂದು ಪರಿಚಯಿಸಿಕೊಂಡಿದ್ದಾರೆ. ಆದ್ದರಿಂದ, ಈ ಕೃತ್ಯಕ್ಕೆ ಕಾಂಗ್ರೆಸ್‌ ಪಕ್ಷವೂ ಹೊಣೆ ಹೊರಬೇಕು ಎಂದು ದೂರಿನಲ್ಲಿ ಬಿಜೆಪಿ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು