ಶನಿವಾರ, ಸೆಪ್ಟೆಂಬರ್ 25, 2021
24 °C

ರಾಜೇಂದ್ರ ಸಿಂಗ್‌ ಬಾಬುಗೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮನೆ ಬಾಡಿಗೆ ವಿವಾದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರಿಗೆ ಸದಾಶಿವನಗರ ಪೊಲೀಸರು ನೋಟಿಸ್ ನೀಡಿದ್ದಾರೆ.

ನೋಟಿಸ್‌ಗೆ ಪ್ರತಿಕ್ರಿಯಿಸಿರುವ ಬಾಬು ಅವರು, ‘ಕೆಲಸದ ನಿಮಿತ್ತ ನಗರದಿಂದ ಹೊರಗೆ ಬಂದಿದ್ದೇನೆ. ಹೀಗಾಗಿ, ಸ್ವಲ್ಪ ಕಾಲಾವಕಾಶ ನೀಡಬೇಕು’ ಎಂದು ಕೋರಿದ್ದಾರೆ. ಈ ಮನವಿ ಮಾನ್ಯ ಮಾಡಿರುವ ಪೊಲೀಸರು, ‘ನಗರಕ್ಕೆ ಮರಳಿದ ಕೂಡಲೇ ವಿಚಾರಣೆಗೆ ಹಾಜರಾಗಬೇಕು’ ಎಂದು ಸೂಚಿಸಿದ್ದಾರೆ.

ಆರ್‌ಎಂವಿ ಬಡಾವಣೆಯಲ್ಲಿ ಪ್ರಸನ್ನ ಎಂಬುವರ ಮನೆಯಲ್ಲಿ ನೆಲೆಸಿರುವ ಅವರು, ಇತ್ತೀಚೆಗೆ ಬಾಡಿಗೆ ವಿಚಾರದಲ್ಲಿ ವಿವಾದ ಸೃಷ್ಟಿಸಿಕೊಂಡಿದ್ದರು.

‘ಮನೆ ಬಾಡಿಗೆ ಕೇಳಿದ್ದಕ್ಕೆ ರಾಜೇಂದ್ರ ಸಿಂಗ್ ಬಾಬು ಹಾಗೂ ಅವರ ಮಗ ಆದಿತ್ಯ ನನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ’ ಎಂದು ಆರೋಪಿಸಿ ಮೇ 5ರಂದು ಸದಾಶಿವನಗರ ಠಾಣೆಗೆ ಪ್ರಸನ್ನ ದೂರು ಕೊಟ್ಟಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು