ಗಾಂಜಾ ಮಾರಾಟ: ಮೂವರ ಬಂಧನ

7
ಫಲ ನೀಡುತ್ತಿರುವ ನಾಗರಿಕ ಗಸ್ತು ತಂಡ ರಚನೆ: ಮಾಹಿತಿ ನೀಡುತ್ತಿರುವ ಸದಸ್ಯರು

ಗಾಂಜಾ ಮಾರಾಟ: ಮೂವರ ಬಂಧನ

Published:
Updated:

ಹುಬ್ಬಳ್ಳಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಅರೋಪದ ಮೇಲೆ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ನರೇಶ (22), ನಾಗೇಶ (19) ಹಾಗೂ ಮತ್ಯಾರಾಜ (25) ಬಂಧಿತರು. ಅವರಿಂದ ₹2 ಲಕ್ಷ ಮೌಲ್ಯದ 20 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.

ಸ್ಥಳೀಯ ಕೆಲವು ಆರೋಪಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದರು. ನಾಗರಿಕ ಗಸ್ತು ತಂಡದ ಸದಸ್ಯರು ನೀಡಿದ ಮಾಹಿತಿ ಮೇರೆಗೆ ಅವರನ್ನು ಬಂಧಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ, ಉತ್ತರ ಕನ್ನಡ, ಬಾಗಲಕೋಟೆಯಲ್ಲಿಯೂ ಅವರು ಗಾಂಜಾ ಮಾರಾಟ ಮಾಡುತ್ತಿದ್ದರು. ಆಂಧ್ರಪ್ರದೇಶದ ಅಧಿಕಾರಿಗಳೊಂದಿಗೆ ಸಹ ಮಾತನಾಡಿ ಬಂಧಿತರ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಕಮಿಷನರ್ ಎಂ.ಎನ್. ನಾಗರಾಜ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಗಾಂಜಾ ಮಾರಾಟವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುತ್ತದೆ. ರೌಡಿ ಪಟ್ಟಿಗೆ ಸೇರಿಸಲಾಗುತ್ತದೆ ಹಾಗೂ ಗಡಿ ಪಾರು ಸಹ ಮಾಡಲಾಗುವುದು. ಇದಕ್ಕಾಗಿಯೇ ಎಸಿಪಿ ಪಠಾಣ್ ಅವರ ನೇತೃತ್ವದಲ್ಲಿ ವಿಶೇಷ ತಂಡವೊಂದನ್ನು ರಚಿಸಲಾಗಿದೆ. ಬೆಂಡಿಗೇರಿ ಠಾಣೆ ಇನ್‌ಸ್ಪೆಕ್ಟರ್ ಸಂತೋಷ್ ಕುಮಾರ್. ಎಸ್‌.ಐ ವಿನೋದ್ ಪೂಜಾರಿ ಹಾಗೂ ಸಿಬ್ಬಂದಿ ತಂಡದಲ್ಲಿದ್ದಾರೆ ಎಂದರು.

ಮಾದಕ ವಸ್ತುಗಳ ವಿರುದ್ಧ ಕ್ರಮ ಕೈಗೊಳ್ಳುವುದರ ಜೊತೆಗೆ ಆ ಬಗ್ಗೆ ಯುವಕರಲ್ಲಿ ಜಾಗೃತಿ ಸಹ ಮೂಡಿಸಲಾಗುತ್ತದೆ. ಇದೇ 16ರಂದು ಬೃಹತ್ ಜಾಗೃತಿ ಜಾಥಾ ಸಹ ಏರ್ಪಡಿಸಲಾಗಿದ್ದು, ಸುಮಾರು 3 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ವಿವಿಧ ಸಂಘ– ಸಂಸ್ಥೆಗಳು ಸಹ ಕೈಜೋಡಿಸಲಿವೆ ಎಂದು ಮಾಹಿತಿ ನೀಡಿದರು. ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !