ಐಐಎಸ್ಸಿ: ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆ

ಸೋಮವಾರ, ಮೇ 27, 2019
24 °C

ಐಐಎಸ್ಸಿ: ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆ

Published:
Updated:
Prajavani

ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ಸೋಮವಾರ ರಾತ್ರಿ ದ್ವಿತೀಯ ವರ್ಷದ ಎಂ.ಟೆಕ್ ವಿದ್ಯಾರ್ಥಿ ಅಮೇಯ್ ಮನೋಜ್ ಚುಟ್ಕೆ (24) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಮನೋಜ್ ಸ್ನೇಹಿತ ಅಜಿಂಕೆ ಆ ದಿನ ರಾತ್ರಿ 12 ಗಂಟೆ ಸುಮಾರಿಗೆ ಕೊಠಡಿಗೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಅವರು ಹಾಸ್ಟೆಲ್ ಆಡಳಿತ ಮಂಡಳಿಗೆ ವಿಷಯ ಮುಟ್ಟಿಸಿದ್ದಾರೆ.

ಮನೋಜ್ ಅವರ ಮೊಬೈಲ್ ಹಾಗೂ ಲ್ಯಾಪ್‌ಟಾಪ್‌ ಪರಿಶೀಲಿಸಲಾಗಿದೆ. ರಾತ್ರಿ 8.30ರ ಸುಮಾರಿಗೆ ತಾಯಿಗೆ ಕರೆ ಮಾಡಿ ಸುಮಾರು ಅರ್ಧ ತಾಸು ಮಾತನಾಡಿದ್ದಾರೆ. ಅದೇ ಅವರ ಕೊನೆಯ ಕರೆ. ‘ಮಗ ಕೆಲ ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ. ಆತನಿಗೆ ನಿಮ್ಹಾನ್ಸ್ ನಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದೆವು’ ಎಂದು ಮೃತರ ಪೋಷಕರು ಹೇಳಿರುವುದಾಗಿ ಪೊಲೀಸರು ತಿಳಿಸಿದರು.

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !