ನಗರದಲ್ಲಿನ ಅನಧಿಕೃತ ಬಡಾವಣೆಗಳ ಮೇಲೆ ನಿಗಾ

7
ಪರಿಶೀಲನೆಗೆ ನೋಂದಣಿ ಮುದ್ರಾಂಕ ಇಲಾಖೆಯಿಂದ ವಿಶೇಷ ತಂಡ

ನಗರದಲ್ಲಿನ ಅನಧಿಕೃತ ಬಡಾವಣೆಗಳ ಮೇಲೆ ನಿಗಾ

Published:
Updated:

ಬೆಂಗಳೂರು: ನಗರದಲ್ಲಿರುವ ಅನಧಿಕೃತ ಬಡಾವಣೆಗಳ ವಿರುದ್ಧ ಕ್ರಮ ಕೈಗೊಳ್ಳಲು ನೋಂದಣಿ ಹಾಗೂ ಮುದ್ರಾಂಕ ಇಲಾಖೆ ವಿಶೇಷ ತಂಡಗಳನ್ನು ರಚಿಸಿದೆ. ಮುಂದಿನ ವಾರದಿಂದ ಕಾರ್ಯಾಚರಣೆ ನಡೆಯಲಿದೆ.

‘ಇತ್ತೀಚಿನ ವರ್ಷಗಳಲ್ಲಿ ಜಿಗಣಿ, ಯಲಹಂಕ, ದೇವನಹಳ್ಳಿ, ಸರ್ಜಾಪುರ ರಸ್ತೆ, ಹೊಸಕೋಟೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನೂರಾರು ಬಡಾವಣೆಗಳು ತಲೆ ಎತ್ತಿವೆ. ಅನಧಿಕೃತ ಬಡಾವಣೆಗಳ ಸಂಖ್ಯೆ ಸಾಕಷ್ಟು ಇದೆ. ಈ ಬಗ್ಗೆ ಮಾಹಿತಿ ಲಭಿಸಿದೆ. ಹೀಗಾಗಿ, ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಇಲಾಖೆಯ ಆಯುಕ್ತ ಕೆ.ವಿ.ತ್ರಿಲೋಕ್‌ಚಂದ್ರ ‘‍ಪ್ರಜಾವಾಣಿ’ಗೆ ತಿಳಿಸಿದರು.

ಇತ್ತೀಚಿನ ವರ್ಷಗಳಲ್ಲಿ ಇಲ್ಲಿನ ಕೃಷಿ ಭೂಮಿಗಳಲ್ಲಿ ಬಡಾವಣೆಗಳು ತಲೆ ಎತ್ತುತ್ತಿವೆ. ಹಸಿರು ವಲಯದಲ್ಲಿ ಬಡಾವಣೆ ನಿರ್ಮಾಣ ಮತ್ತು ಕಂದಾಯ ಭೂಮಿಯ ಅಕ್ರಮ ನೋಂದಣಿ ಮೂಲಕ ಸರ್ಕಾರಕ್ಕೆ ವಂಚನೆ ಮಾಡಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !