ಗುರುವಾರ , ನವೆಂಬರ್ 14, 2019
18 °C
ಸರ್ಕಾರಿ ಅಧಿಕಾರಿಗಳ ವಿರುದ್ಧದ ತನಿಖೆಗೆ ಪೂರ್ವಾನುಮತಿ

ಐಎಂಎ: ಅಧಿಸೂಚನೆ ಹೊರಡಿಸಲು ನಿರ್ದೇಶನ

Published:
Updated:
Prajavani

ಬೆಂಗಳೂರು: ‘ಐಎಂಎ (ಐ ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಸರ್ಕಾರಿ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುವಾಗುವಂತೆ ಪೂರ್ವಾನುಮತಿ ನೀಡಿದ ಅಧಿಸೂಚನೆಯನ್ನು ಶೀಘ್ರವೇ ಹೊರಡಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತಂತೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌. ಎಸ್. ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲ ಅಜಿತ್ ಅಚ್ಚಪ್ಪ, ಐಎಂಎಗೆ ಸೇರಿದ ಸ್ಥಿರ ಮತ್ತು ಚರಾಸ್ತಿ ಜಪ್ತಿಗೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರ ಕೈಗೊಂಡಿರುವ ಕ್ರಮಗಳ ಬಗ್ಗೆಗಿನ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಅಂತೆಯೇ ಸಿಬಿಐ ಪರ ವಕೀಲ ಪಿ. ಪ್ರಸನ್ನಕುಮಾರ್, ‘ಕಳೆದ ತಿಂಗಳ 30ರಂದು ಸಿಬಿಐ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದೆ’ ಎಂದು ವಿವರಿಸಿ ತನಿಖೆಯ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ನೀಡಿದರು.

ವರದಿ ಪರಿಶೀಲಿಸಿದ ನ್ಯಾಯಪೀಠ, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ತಿ ಜಪ್ತಿ ಪ್ರಕ್ರಿಯೆ ನಡೆಸುತ್ತಿರುವ ಸಕ್ಷಮ ಪ್ರಾಧಿಕಾರದ ಮುಖ್ಯಸ್ಥ ಹರ್ಷ ಗುಪ್ತಾ ಅವರಿಗೆ ತಕ್ಷಣವೇ ಅಗತ್ಯ 25 ಸಿಬ್ಬಂದಿ ಒದಗಿಸಬೇಕು’ ಎಂದೂ ನಿರ್ದೇಶಿಸಿತು.

‘ಪ್ರಕರಣದಲ್ಲಿ ಅರ್ಜಿದಾರರು ಏನು ಎಂಬುದರ ಬಗ್ಗೆ ವಿವರ ಸಲ್ಲಿಸಿ’

‘ಐಎಂಎ (ಐ ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣ ದಲ್ಲಿ ಜಾಮೀನು ಕೋರಿ 7 ಆರೋಪಿಗಳು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ, ‘ಪ್ರಕರಣದಲ್ಲಿ ಅರ್ಜಿದಾರರು ಏನು ಎಂಬುದರ ಬಗ್ಗೆ ವಿವರ ಸಲ್ಲಿಸಿ’ ಎಂದು ಹೈಕೋರ್ಟ್ ಸಿಬಿಐಗೆ ಸೂಚಿಸಿದೆ.

ಈ ಕುರಿತಂತೆ ಏಳು ಜನ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಕೆ.ಎನ್‌.ಫಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಸಿಬಿಐ ಪರ ವಕೀಲ ಪಿ. ಪ್ರಸನ್ನಕುಮಾರ್, ಸಮಯಾವಕಾಶ ಕೋರಿದ ಕಾರಣ ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಲಾಗಿದೆ.

ಮೌಲ್ವಿ ಮೊಹಮದ್‌ ಹನೀಫ್‌ ಅಫ್ಸರ್‌ ಅಜೀಜ್‌, ರವಿ ನರಾಳೆ, ಸನಾವುಲ್ಲಾ, ಸೈಯದ್‌ ಮುಜಾಹಿದ್‌, ಮೊಹಮದ್‌ ಅಕ್ಬರ್‌ ಶರೀಫ್‌, ಎ.ನಿಜಾಮುದ್ದೀನ್‌ ಮತ್ತು ಎ.ಅಫ್ಸರ್‌ ಪಾಷ. ಆರೋಪಿಗಳ ಹಿರಿಯ ವಕೀಲರಾದ ಬಿ.ವಿ. ಆಚಾರ್ಯ, ಸಿ.ವಿ.ನಾಗೇಶ್‌, ಹಷ್ಮತ್‌ ಪಾಷ, ಎಂ.ಎಸ್‌.ಶ್ಯಾಮಸುಂದರ್‌ ವಾದ ಮಂಡಿಸಿದರು.

ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

‘ಐಎಂಎ (ಐ ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಜಾಮೀನು ಕೋರಿ ಏಳು ಆರೋಪಿಗಳು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ, ‘ಪ್ರಕರಣದಲ್ಲಿ ಅರ್ಜಿದಾರರ ಪಾತ್ರ ಏನು ಎಂಬುದರ ಬಗ್ಗೆ ವಿವರ ಸಲ್ಲಿಸಿ’ ಎಂದು ಹೈಕೋರ್ಟ್ ಸಿಬಿಐಗೆ ಸೂಚಿಸಿದೆ.

ಈ ಕುರಿತಂತೆ ಏಳು ಜನ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಕೆ.ಎನ್‌.ಫಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್, ಸಮಯಾವಕಾಶ ಕೋರಿದ ಕಾರಣ ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಲಾಗಿದೆ.

ಮೌಲ್ವಿ ಮೊಹಮದ್‌ ಹನೀಫ್‌ ಅಫ್ಸರ್‌ ಅಜೀಜ್‌, ರವಿ ನರಾಳೆ, ಸನಾವುಲ್ಲಾ, ಸೈಯದ್‌ ಮುಜಾಹಿದ್‌, ಮೊಹಮದ್‌ ಅಕ್ಬರ್‌ ಶರೀಫ್‌, ಎ.ನಿಜಾಮುದ್ದೀನ್‌ ಮತ್ತು ಎ.ಅಫ್ಸರ್‌ ಪಾಷ.

ಆರೋಪಿಗಳ ಹಿರಿಯ ವಕೀಲರಾದ ಬಿ.ವಿ.ಆಚಾರ್ಯ, ಸಿ.ವಿ.ನಾಗೇಶ್‌, ಹಷ್ಮತ್‌ ಪಾಷ, ಎಂ.ಎಸ್‌.ಶ್ಯಾಮಸುಂದರ್‌ ವಾದ ಮಂಡಿಸಿದರು.

ಪ್ರತಿಕ್ರಿಯಿಸಿ (+)