ಶುಕ್ರವಾರ, ಆಗಸ್ಟ್ 23, 2019
22 °C

ಮುಂದಿನ ವರ್ಷ ಪಾಕ್‌ ಆಕ್ರಮಿತ ಕಾಶ್ಮೀರ ಇರಲ್ಲ: ಶೋಭಾ

Published:
Updated:
Prajavani

ಬೆಂಗಳೂರು: ಮುಂದಿನ ಸ್ವಾತಂತ್ರ್ಯೋತ್ಸವದ ವೇಳೆಗೆ ಪಾಕ್‌ ಆಕ್ರಮಿತ ಕಾಶ್ಮೀರ ಎನ್ನುವುದೇ ಇರುವುದಿಲ್ಲ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಪಕ್ಷದ ಕಚೇರಿಯಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸಂವಿಧಾನದ 370ನೇ ವಿಧಿ ರದ್ದುಪಡಿಸುವ ಮೂಲಕ ಅಖಂಡ ಭಾರತದ ಕಲ್ಪನೆ ಸಾಕಾರಗೊಳಿಸುವಲ್ಲಿ ಪ್ರಧಾನಿ ಮೋದಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ’ ಎಂದರು.

ದೇಶ ಎದುರಿಸುತ್ತಿರುವ ಸಮಸ್ಯೆಗಳಿಗೆಲ್ಲಾ ಪರಿಹಾರ ಎನ್ನುವಂತೆ ಸಂವಿಧಾನದ 370ನೇ ವಿಧಿ ರದ್ದುಪಡಿಸಲಾಗಿದೆ. ದೇಶವನ್ನು ಸಶಕ್ತವಾಗಿ ಮುನ್ನಡೆಸಲು ಮೋದಿಯವರ ಕೈಬಲಪಡಿಸುವುದು ಅಗತ್ಯವಾಗಿದೆ ಎಂದು ಮುಖಂಡ ರಾಮಚಂದ್ರಗೌಡ ಹೇಳಿದರು.

ಶಾಸಕ ಆರ್‌.ಅಶೋಕ್‌ ‘ಈ ಬಾರಿಯ ಸ್ವಾತಂತ್ರ್ಯೋತ್ಸವ ಹಿಂದೆಂದಿಗಿಂತಲೂ ಹೆಚ್ಚಿನ ಮಹತ್ವ ಪಡೆದಿದೆ’ ಎಂದು ತಿಳಿಸಿದರು.

ಧ್ವಜಾರೋಹಣ ಕಾರ್ಯಕ್ರಮದಲ್ಲಿ ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಬ್ದುಲ್‌ ಅಜೀಂ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ ಇದ್ದರು.

Post Comments (+)