ಇಂದಿರಾ ಕ್ಯಾಂಟೀನ್‌ 15 ದಿನಕ್ಕೊಮ್ಮೆ ಇಂಡೆಂಟ್‌

ಬುಧವಾರ, ಏಪ್ರಿಲ್ 24, 2019
31 °C

ಇಂದಿರಾ ಕ್ಯಾಂಟೀನ್‌ 15 ದಿನಕ್ಕೊಮ್ಮೆ ಇಂಡೆಂಟ್‌

Published:
Updated:

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗೆ ಖರೀದಿಸಿದ ದಿನಸಿ ಪದಾರ್ಥಗಳ ಖರೀದಿಗೆ ಸಂಬಂಧಿಸಿದ ಇಂಡೆಂಟ್‌ಅನ್ನು (ಬೇಡಿಕೆ ಪಟ್ಟಿ) ಪ್ರತಿ 15 ದಿನಗಳಿಗೊಮ್ಮೆ ಸಲ್ಲಿಸಬೇಕು ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರಿಗೆ ಸೂಚನೆ ನೀಡಿದೆ.

ದಿನಸಿ ಖರೀದಿ ಹೆಸರಿನಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ವಿರೋಧ ಪಕ್ಷದಿಂದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಈ ತೀರ್ಮಾನ ಕೈಗೊಂಡಿದೆ.

ಗುತ್ತಿಗೆದಾರರು ಈ ಮುನ್ನ ಅವರು ಪ್ರತಿ ತಿಂಗಳಿಗೆ ಒಂದು ಬಾರಿ ಇಂಡೆಂಟ್‌ ಸಲ್ಲಿಸಬೇಕಿತ್ತು. ಇನ್ನುಮುಂದೆ ತಿಂಗಳಲ್ಲಿ ಎರಡು ಬಾರಿ ಬೇಡಿಕೆ ಪಟ್ಟಿಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

‘ಇಂಡೆಂಟ್‌ ಸುಳ್ಳು ಮಾಹಿತಿಯಿಂದ ಕೂಡಿರುತ್ತವೆ ಎಂಬ ವಿಷಯವಾಗಿ ಹಲವು ದೂರುಗಳು ಬಂದಿವೆ. ಹೀಗಾಗಿ ಪ್ರತಿ 15 ದಿನಗಳಿಗೊಮ್ಮೆ ವಿವರ ಪಡೆದು ಪರಿಶೀಲಿಸಲು ನಿರ್ಧರಿಸಿದ್ದೇವೆ’ ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಇಂದಿರಾ ಕ್ಯಾಂಟೀನ್‌ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಲ್ಲಿಕೆಯಾದ ಎಲ್ಲ ಬಿಲ್‌ಗಳನ್ನು ಸಮಗ್ರವಾಗಿ ಪರಿಶೋಧನೆಗೆ ಒಳಪಡಿಸಲೂ ಬಿಬಿಎಂಪಿ ತೀರ್ಮಾನಿಸಿದೆ. ಈ ಕಾರ್ಯಕ್ಕಾಗಿಯೇ ನಾಲ್ವರು ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಬಿಜೆಪಿಯಿಂದ ಆರೋಪ: ‘ಇಂದಿರಾ ಕ್ಯಾಂಟೀನ್‌ ಹೆಸರಿನಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು ಆ ಹಣವನ್ನು ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಚುನಾವಣಾ ವೆಚ್ಚಕ್ಕೆ ಬಳಸಿಕೊಳ್ಳಲಾಗುತ್ತಿದೆ’ ಎಂದು ಬಿಜೆಪಿ ಶಾಸಕ ಆರ್‌.ಅಶೋಕ್‌ ಆರೋಪಿಸಿದ್ದರು. ‘ಪ್ರತಿ ಕ್ಯಾಂಟೀನ್‌ನಲ್ಲಿ ಸಾವಿರಕ್ಕೂ ಹೆಚ್ಚು ಜನರು ಊಟ, ತಿಂಡಿ ಸೇವನೆ ಮಾಡುತ್ತಾರೆ ಎಂದು ಸುಳ್ಳು ಲೆಕ್ಕ ನೀಡಲಾಗುತ್ತಿದೆ. ಆದರೆ, ವಾಸ್ತವವಾಗಿ ಕ್ಯಾಂಟೀನ್‌ಗೆ ದಿನದಲ್ಲಿ 200 ಜನರೂ ಬರುವುದಿಲ್ಲ’ ಎಂದೂ ಅವರು ದೂರಿದ್ದರು.

‘ಕ್ಯಾಂಟೀನ್‌ಗಳಲ್ಲಿ ಪೂರೈಸುವ ಆಹಾರದ ಗುಣಮಟ್ಟ ಕಳಪೆಯಾಗಿದ್ದು, ರೋಗಕಾರಕವಾಗಿದೆ. ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾಗಳೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು’ ಎಂದು ಪಾಲಿಕೆ ಸದಸ್ಯ ಉಮೇಶ್‌ ಶೆಟ್ಟಿ ಆಗ್ರಹಿಸಿದ್ದರು

ಎಲ್ಲ ಇಂದಿರಾ ಕ್ಯಾಂಟೀನ್‌ಗಳ ಆಹಾರವನ್ನು ಮಾನ್ಯತೆ ಪಡೆದ ಪ್ರಯೋಗಾಲಯಗಳಲ್ಲಿ ವೈಜ್ಞಾನಿಕವಾಗಿ ಪರಿಶೀಲನೆಗೆ ಬಿಬಿಎಂಪಿ ನಿರ್ಧರಿಸಿದೆ.

ಬಿಜೆಪಿಯಿಂದ ಆರೋಪ:

‘ಇಂದಿರಾ ಕ್ಯಾಂಟೀನ್‌ ಹೆಸರಿನಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು ಆ ಹಣವನ್ನು ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಚುನಾವಣಾ ವೆಚ್ಚಕ್ಕೆ ಬಳಸಿಕೊಳ್ಳಲಾಗುತ್ತಿದೆ’ ಎಂದು ಬಿಜೆಪಿ ಶಾಸಕ ಆರ್‌.ಅಶೋಕ್‌ ಆರೋಪಿಸಿದ್ದರು.

‘ಪ್ರತಿ ಕ್ಯಾಂಟೀನ್‌ನಲ್ಲಿ ಸಾವಿರಕ್ಕೂ ಹೆಚ್ಚು ಜನರು ಊಟ, ತಿಂಡಿ ಸೇವನೆ ಮಾಡುತ್ತಾರೆ ಎಂದು ಸುಳ್ಳು ಲೆಕ್ಕ ನೀಡಲಾಗುತ್ತಿದೆ. ಆದರೆ, ವಾಸ್ತವವಾಗಿ ಕ್ಯಾಂಟೀನ್‌ಗೆ ದಿನದಲ್ಲಿ 200 ಜನರೂ ಬರುವುದಿಲ್ಲ’ ಎಂದೂ ಅವರು ದೂರಿದ್ದರು. ‘ಕ್ಯಾಂಟೀನ್‌ಗಳಲ್ಲಿ ಪೂರೈಸುವ ಆಹಾರದ ಗುಣಮಟ್ಟ ಕಳಪೆಯಾಗಿದ್ದು, ರೋಗಕಾರಕವಾಗಿದೆ. ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾಗಳೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು’ ಎಂದು ಪಾಲಿಕೆ ಸದಸ್ಯ ಉಮೇಶ್‌ ಶೆಟ್ಟಿ ಆಗ್ರಹಿಸಿದ್ದರು.

ಎಲ್ಲ ಇಂದಿರಾ ಕ್ಯಾಂಟೀನ್‌ಗಳ ಆಹಾರವನ್ನು ಮಾನ್ಯತೆ ಪಡೆದ ಪ್ರಯೋಗಾಲಯಗಳಲ್ಲಿ ವೈಜ್ಞಾನಿಕವಾಗಿ ಪರಿಶೀಲನೆಗೆ ಬಿಬಿಎಂಪಿ ನಿರ್ಧರಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !