ಭಾನುವಾರ, ಅಕ್ಟೋಬರ್ 20, 2019
27 °C

ಜಾತಿಗಣತಿ ವರದಿಗೆ ಅಪಚಾರ: ಆಕ್ರೋಶ

Published:
Updated:

ಬೆಂಗಳೂರು: ‘ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಜಾತಿಗಣತಿ ಮಾಡಿ ಸಿದ್ಧಪಡಿಸಿರುವ ವರದಿ ಸ್ವೀಕರಿಸಲು ರಾಜ್ಯಸರ್ಕಾರ ಹಿಂಜರಿಯುತ್ತಿರುವುದು ಹಿಂದುಳಿದ ಜನಾಂಗಕ್ಕೆ ಮಾಡಿರುವ ಅಪಚಾರ’ ಎಂದು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ. 

‘ಹಿಂದಿನ ಸರ್ಕಾರವು ₹158 ಕೋಟಿ ವೆಚ್ಚದಲ್ಲಿ ಜಾತಿಗಣತಿ ನಡೆಸುವ ಮೂಲಕ ಸಾಮಾಜಿಕ, ಶೈಕ್ಷಣಿಕ, ಉದ್ಯೋಗ, ಕೌಟುಂಬಿಕ ಆಸ್ತಿಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿ ವರದಿ ಸಿದ್ಧಪಡಿಸಿತ್ತು. ಈ ವರದಿಯನ್ನು ಸ್ವೀಕರಿಸಿ, ರಾಜ್ಯದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸಬೇಕಾಗಿತ್ತು. ಆದರೆ, ವರದಿಯನ್ನು ಸ್ವೀಕರಿಸದೇ ಸರ್ಕಾರ ಜನರಿಗೆ ಅನ್ಯಾಯ ಮಾಡಿದೆ’ ಎಂದು ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಪ್ರಕಟಣೆಯಲ್ಲಿ ಹೇಳಿದ್ದಾರೆ. 

‘ಸರ್ಕಾರವು ವರದಿ ಜಾರಿಗೆ ತರದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಅವರು ಎಚ್ಚರಿಸಿದ್ದಾರೆ.

Post Comments (+)