ಬುಧವಾರ, ನವೆಂಬರ್ 20, 2019
25 °C

ಜೆಡಿಎಸ್ ತ್ಯಜಿಸಲ್ಲ: ಜವರಾಯಿಗೌಡ

Published:
Updated:

ರಾಜರಾಜೇಶ್ವರಿನಗರ: ‘ಯಾವುದೇ ಕಾರಣಕ್ಕೂ ಜೆಡಿಎಸ್‌ ಪಕ್ಷವನ್ನು ತ್ಯಜಿಸುವುದಿಲ್ಲ’ ಎಂದು ಯಶವಂತಪುರ ಕ್ಷೇತ್ರ ಘಟಕದ ಅಧ್ಯಕ್ಷ ಟಿ.ಎನ್‌.ಜವರಾಯಿಗೌಡ ಸ್ಪಷ್ಟಪಡಿಸಿದರು.

‘ಮುಂಬರುವ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರ’ ಎಂದು ಸುದ್ದಿಗಾರರಿಗೆ ತಿಳಿಸಿದರು.

‘ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ನೂರಾರು ಕಾರ್ಯಕರ್ತರ ಪರಿಶ್ರಮ ಹಾಗೂ ಹೋರಾಟದೊಂದಿಗೆ ಪಕ್ಷವನ್ನು ಬಲಿಷ್ಠವಾಗಿ ಕಟ್ಟಿ ಬೆಳೆಸಿರುವೆ. ಎರಡು ಬಾರಿ ಪಕ್ಷ ಟಿಕೆಟ್ ನೀಡಿತ್ತು. ಕೆಲವೇ ಸಾವಿರ ಮತಗಳ ಅಂತರದಿಂದ ಪರಾಭವಗೊಂಡರೂ ಧೃತಿಗೆಡದೆ ಪಕ್ಷ ಸಂಘಟನೆ ಮಾಡಿದ್ದೇನೆ. ಈ ಸಲ ಜೆಡಿಎಸ್‌ಗೆ ಗೆಲುವು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರತಿಕ್ರಿಯಿಸಿ (+)