ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪತ್ರಕರ್ತರು ಸಮುದಾಯದ ಆಶಯಗಳಿಗೆ ಸ್ಪಂದಿಸಲಿ’

Last Updated 25 ಜುಲೈ 2019, 14:12 IST
ಅಕ್ಷರ ಗಾತ್ರ

ಮುಧೋಳ: ‘ಸಾರ್ವಜನಿಕರ, ದೀನ ದಲಿತರ ಧ್ವನಿಯಾಗಬೇಕಿದ್ದ ಪತ್ರಕರ್ತರು ರಾಜಕೀಯ ವ್ಯಕ್ತಿಗಳೊಂದಿಗೆ ಗುರುತಿಸಿಕೊಳ್ಳುತ್ತಿದ್ದು ಈ ಕುರಿತು ಆತ್ಮಾವಲೋಕನದ ಅಗತ್ಯವಿದೆ’ ಎಂದು ಎಂದು ಬಾಗಲಕೋಟೆಯ ಹಿರಿಯ ಪತ್ರಕರ್ತ ರಾಮ ಮನಗೂಳಿ ಹೇಳಿದರು.

ಅವರು ನಗರದ ಎಸ್.ಆರ್.ಕಂಠಿ ಕಾಲೇಜಿನ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗ ಬುಧವಾರ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಮಾತನಾಡಿದರು.

ಇದೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅವರೊಂದಿಗೆ ಸಂವಾದ ನಡೆಸಿದರು.

ಕಾನಿಪ ಸಂಘದ ಅಧ್ಯಕ್ಷ ಬಿ.ರತ್ನಾಕರ ಶೆಟ್ಟಿ, ಪತ್ರಕರ್ತ ಎಂ.ಎಚ್.ನದಾಫ್‌ ಮಾತನಾಡಿದರು. ಪ್ರಾಚಾರ್ಯ ಡಾ.ಎನ್.ಬಿ.ಇಂಗನಾಳ ಅಧ್ಯಕ್ಷತೆವಹಿಸಿದ್ದರು.

ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ವಿಶ್ವನಾಥ ಮುನವಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಐಕ್ಯೂಎಸಿ ಸಂಯೋಜಕಿ ಪ್ರೊ.ಎಸ್.ಎಸ್. ಬಿರಾದಾರ ಸ್ವಾಗತಿಸಿದರು, ಪ್ರೊ.ಆರ್.ಆರ್.ಮಾಲಿ ಪಾಟೀಲ ಮತ್ತು ಪ್ರೊ.ಆಶಾ ಮಂಟೂರ ನಿರೂಪಿಸಿದರು. ಡಾ.ಎಂ.ಆರ್.ಜರಕುಂಟಿ ವಂದಿಸಿದರು, ವಿದ್ಯಾರ್ಥಿನಿ ಶಿಲ್ಪಾ ಮೀಸಿ ಪ್ರಾರ್ಥನೆ ಗೀತೆ ಹಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT