ಶನಿವಾರ, ಸೆಪ್ಟೆಂಬರ್ 19, 2020
27 °C

ಕನ್ನಡದ ಕಾಳಜಿಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಂಗಳೂರು: ಕೆ.ಆರ್.ಪುರ ಸಮೀಪದ ಐಟಿಐ ಬಳಿಯ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯಲ್ಲಿ ಮನೋರಂಜನಾ‌ ಸಂಘದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಶಿಕ್ಷಕ ಡಾ.ಎಂ.ಶಿವಕುಮಾರ್ ಉದ್ಘಾಟಿಸಿದರು.

‘ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯಲ್ಲಿ ಕನ್ನಡಿಗರು ಕೂಡ ಕನ್ನಡದ ಕೆಲಸ ಮಾಡುತ್ತಿರುವುದು ಖುಷಿ ಕೊಡುವ ವಿಚಾರ. ನಗರದಲ್ಲಿ ಹಲವು ಭಾಷಿಕರಿದ್ದು‌ ಅವರೆಲ್ಲರೂ ಕನ್ನಡದ ಬಗ್ಗೆ ವಿಶೇಷ ಕಾಳಜಿ ಹೊಂದಬೇಕು. ಬಹುರಾಷ್ಟ್ರೀಯ ಕಂಪನಿಗಳು ಕನ್ನಡದ ಒಲವು ಹೊಂದಬೇಕು’ ಎಂದರು.

‘ಬಹುಶಃ ತಮಿಳುನಾಡನ್ನು ಬಿಟ್ಟರೆ ಕರ್ನಾಟಕದಲ್ಲಿ ದೊರೆಯುವಷ್ಟು ಶಾಸನಗಳು ಭಾರತದ ಯಾವ ಪ್ರಾಂತದಲ್ಲಿಯೂ ಸಿಗುವುದಿಲ್ಲ. ಸುಮಾರು 20 ಸಾವಿರಕ್ಕೂ ಹೆಚ್ಚು ಶಾಸನಗಳು ಕರ್ನಾಟಕದಲ್ಲಿ ಈವರೆಗೆ ದೊರಕಿವೆ’ ಎಂದರು.

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು. 2017-18 ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ವಿಜೇತ ಹಾಗೂ ಅಂತರರಾಷ್ಟ್ರೀಯ ಕ್ರೀಡಾಪಟು ಡಾ.ಜಿ.ರಮೇಶಪ್ಪ ಅವರನ್ನು ಸನ್ಮಾನಿಸಲಾಯಿತು. ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ರಾಮನ್ ಧನಶೇಖರ್, ನೌಕರರ ಸಂಘದ ಕಾರ್ಯದರ್ಶಿ ಎಂ.ನಾಗರಾಜ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು