ಕರಗದಲ್ಲಿ ಕಿತ್ತಾಟ; ವಿಡಿಯೊ ವೈರಲ್

ಮಂಗಳವಾರ, ಮೇ 21, 2019
24 °C

ಕರಗದಲ್ಲಿ ಕಿತ್ತಾಟ; ವಿಡಿಯೊ ವೈರಲ್

Published:
Updated:

ಬೆಂಗಳೂರು: ಹಲಸೂರು ಗೇಟ್ ಸಮೀಪದ ಧರ್ಮರಾಯ ದೇವಸ್ಥಾನದ ಬಳಿ ಶುಕ್ರವಾರ ರಾತ್ರಿ ಕರಗ ಆಚರಣೆ ವೇಳೆ ಇಬ್ಬರು ಪಾನಮತ್ತ ಯುವಕರು  ಪೊಲೀಸರ ಎದುರೇ ಬಡಿದಾಡಿಕೊಂಡಿದ್ದಾರೆ.

ರಾತ್ರಿ 12.30ರ ಸುಮಾರಿಗೆ ಯುವಕರು ಏಕಾಏಕಿ ಒಬ್ಬರಿಗೊಬ್ಬರು ಹೊಡೆದುಕೊಳ್ಳುತ್ತ ಜನರ ಮೇಲೆ ಬಿದ್ದಿದ್ದಾರೆ. ಜಗಳ ಬಿಡಿಸಲು ಬಂದ ಪೊಲೀಸರನ್ನೇ ತಳ್ಳಿ ಗಲಾಟೆ ಮಾಡಿಕೊಂಡಿದ್ದಾರೆ. ಈ ದೃಶ್ಯವನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದು, ವಿಡಿಯೊ ಜಾಲತಾಣಗಳಲ್ಲಿ ಹರಿದಾಡುತ್ತಿದ್ದೆ.

ಹುಡುಗಿಯನ್ನು ಚುಡಾಯಿಸಿದ ವಿಚಾರಕ್ಕೆ ಗಲಾಟೆ ಶುರುವಾಯಿತು ಎನ್ನಲಾಗಿದೆ. ಆದರೆ, ‘ಕ್ಷುಲ್ಲಕ ಕಾರಣಕ್ಕೆ ಯುವಕರು ಕಿತ್ತಾಡಿಕೊಂಡಿದ್ದರು. ಇಬ್ಬರನ್ನೂ ವಶಕ್ಕೆ ಪಡೆದು, ಬುದ್ಧಿ ಹೇಳಿ ಬಿಟ್ಟು ಕಳುಹಿಸಿದೆವು’ ಎಂದು ಹಲಸೂರು ಗೇಟ್ ಪೊಲೀಸರು ಹೇಳಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !