ಮೂರ್ಖ ರಾಜಕಾರಣಿಗಳಿಂದಾಗಿ ಇಂಗ್ಲಿಷ್‌ ಮಾಧ್ಯಮ

ಸೋಮವಾರ, ಮೇ 20, 2019
30 °C
ಸಂಸ್ಕೃತ ವಿಶ್ವವಿದ್ಯಾಲಯ ಸಂಸ್ಥಾಪನಾ ದಿನಾಚರಣೆಯಲ್ಲಿ ಹಿ.ಚಿ.ಬೋರಲಿಂಗಯ್ಯ ಕಿಡಿ

ಮೂರ್ಖ ರಾಜಕಾರಣಿಗಳಿಂದಾಗಿ ಇಂಗ್ಲಿಷ್‌ ಮಾಧ್ಯಮ

Published:
Updated:
Prajavani

ಬೆಂಗಳೂರು: ‘ಮಾನಸಿಕವಾಗಿಯೂ ಭ್ರಷ್ಟರಾಗಿರುವ ಮೂರ್ಖ ರಾಜಕಾರಣಿಗಳು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಆರಂಭಿಸುತ್ತಿದ್ದಾರೆ’ ಎಂದು ಲೇಖಕ ಹಿ.ಚಿ.ಬೋರಲಿಂಗಯ್ಯ ಕಿಡಿಕಾರಿದರು.

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಶುಕ್ರವಾರ ಆಯೋಜಿಸಿದ್ದ ‘ಸಂಸ್ಥಾಪನಾ ದಿನಾಚರಣೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ನಿವೃತ್ತ ಅಧ್ಯಾಪಕರಿಗೆ ಸನ್ಮಾನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಂದಿನ ಪರಿಸ್ಥಿತಿಯಲ್ಲಿ ನಾವು ನಮ್ಮ ಭಾಷೆಗಳನ್ನು ಉಳಿಸಿಕೊಳ್ಳಬೇಕಿದೆ. ಆದರೆ, ಆಡಳಿತಗಾರರ ತೀರ್ಮಾನಗಳಿಂದ ಅವುಗಳನ್ನು ಕಳೆದುಕೊಳ್ಳುವ ಸ್ಥಿತಿಗೆ ಬಂದಿದ್ದೇವೆ’ ಎಂದು ಅವರು ತಿಳಿಸಿದರು.

‘ತುಂಬಾ ಹಿಂದಿನ ಕಾಲದಲ್ಲಿ ಸಂಸ್ಕೃತವನ್ನು ಎಲ್ಲರೂ ಕಲಿಯುವ ಅವಕಾಶ ಇರಲಿಲ್ಲ. ಹಾಗಾಗಿ ಅದು ಎಲ್ಲೆಡೆ ಹರಡಲಿಲ್ಲ. ಆದರೆ, ಇತ್ತೀಚಿನ ವರ್ಷಗಳಿಂದ ಈ ಭಾಷೆ ಕಲಿಯುವ ಅವಕಾಶ ಎಲ್ಲರಿಗೂ ಸಿಗುತ್ತಿದೆ. ಇದನ್ನು ಆಸಕ್ತರು ಬಳಸಿಕೊಳ್ಳಬೇಕು’ ಎಂದರು. 

ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠದ ಕುಲಪತಿ ವಿ.ಮುರಳೀಧರ ಶರ್ಮಾ, ‘ಗುರುಕುಲ ಪದ್ಧತಿಯ ಅಧ್ಯಯನವನ್ನು ಪುನರುಜ್ಜೀವನಗೊಳಿಸಬೇಕು. ಅದಕ್ಕೆ ತಂತ್ರಜ್ಞಾನದ ಸಹಾಯ ಪಡೆಯಬೇಕು. ಸಂಸ್ಕೃತ ಅಧ್ಯಯನ ವಿಸ್ತರಿಸಿದರೆ ಭಾಷೆಯ ಸ್ವರೂಪ ಉಳಿಯುತ್ತದೆ. ಇಲ್ಲದಿದ್ದರೆ ಗ್ರೀಕ್‌, ಲ್ಯಾಟಿನ್‌ನಂತೆ ಸಂಸ್ಕೃತವೂ ಪುಸ್ತಕದಲ್ಲಿಯೇ ಉಳಿಯುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪದ್ಮಾಶೇಖರ್‌, ‘ಇಂದು ರಾಜಕಾರಣ, ಧಾರ್ಮಿಕತೆ ಹಾಗೂ ಮಾಧ್ಯಮಗಳಲ್ಲಿ ಅತಿರೇಕಗಳು ಹೆಚ್ಚುತ್ತಿವೆ. ಅದರಲ್ಲಿಯೇ ಜನರು ಕಳೆದುಹೋಗುತ್ತಿದ್ದಾರೆ. ಆ ಅತಿರೇಕಗಳನ್ನು ತೊಡೆದುಹಾಕುವ ಕೆಲಸವನ್ನೂ ವಿಶ್ವವಿದ್ಯಾಲಯ ಮಾಡಲಿದೆ’ ಎಂದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !