‘ಕ್ರೀಡೆಯಿಂದ ಸದೃಢತೆ’

7
ಖೇಲೋತ್ಸವ –2019 ಉದ್ಘಾಟನೆ

‘ಕ್ರೀಡೆಯಿಂದ ಸದೃಢತೆ’

Published:
Updated:

ಬೆಂಗಳೂರು: ‘ಕ್ರೀಡಾ ಚಟುವಟಿಕೆಗಳಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಸುಧಾರಿಸುತ್ತದೆ. ಕ್ರೀಡೆಗಳಲ್ಲಿ ತೊಡಗದವರು ಸದೃಢತೆ ಹೊಂದಲು ಸಾಧ್ಯವಿಲ್ಲ’ ಎಂದು ಶಾಸಕ ರಾಮಲಿಂಗಾರೆಡ್ಡಿ ಅಭಿಪ್ರಾಯಪಟ್ಟರು.

ನಾರಾಯಣ ಶಿಕ್ಷಣ ಸಂಸ್ಥೆ ನಗರದಲ್ಲಿ ಸೋಮವಾರ ಆಯೋಜಿಸಿದ್ದ ‘ಖೇಲೋತ್ಸವ –2019’ ಉದ್ಘಾಟಿಸಿ ಅವರು ಮಾತನಾಡಿದರು.

‘ಖಾಸಗಿ ಸಂಸ್ಥೆಗಳು ಕ್ರೀಡೆಗೆ ಹೆಚ್ಚು ಮಹತ್ವ ನೀಡುತ್ತಿವೆ. ಆದ್ದರಿಂದ ಕ್ರೀಡಾಪಟುಗಳಿಗೆ ಉತ್ತಮ ಸೌಲಭ್ಯಗಳು ದೊರೆಯುತ್ತಿವೆ. ವಿದ್ಯಾರ್ಥಿಗಳು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.

‘ನಾರಾಯಣ ಶಿಕ್ಷಣ ಸಂಸ್ಥೆ ಮೊದಲಿನಿಂದಲೂ ಕ್ರೀಡೆಗಳಿಗೆ ಪ್ರಾಮುಖ್ಯ ನೀಡುತ್ತಾ ಬಂದಿದೆ. ಇಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಭಾಗವಹಿಸಿದ್ದಾರೆ’ ಎಂದರು.

ಶಾಸಕಿ ಸೌಮ್ಯಾ ರೆಡ್ಡಿ, ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ, ರಾಷ್ಟ್ರೀಯ ಬ್ಯಾಸ್ಕೆಟ್‌ ಬಾಲ್‌ ತಂಡದ ನಾಯಕ ಸಂಜಯ್‌ರಾಜ್‌, ಈಜುಪಟು ಶರತ್ ಗಾಯಕ್ವಾಡ್‌ ಇದ್ದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !