ಮರು ಪರಿಶೀಲನಾ ಅರ್ಜಿ ವಜಾ

ಶನಿವಾರ, ಏಪ್ರಿಲ್ 20, 2019
31 °C

ಮರು ಪರಿಶೀಲನಾ ಅರ್ಜಿ ವಜಾ

Published:
Updated:

ಬೆಂಗಳೂರು: ‘1998, 1999 ಮತ್ತು 2004ರ ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠ 2016ರ ಜೂನ್‌ 21ರಂದು ನೀಡಿದ್ದ ಆದೇಶವನ್ನು ಮರು ಪರಿಶೀಲಿಸಬೇಕು’ ಎಂಬ ಕೋರಿಕೆಯನ್ನು ಹೈಕೋರ್ಟ್ ವಜಾ ಮಾಡಿದೆ.

ಈ ಕುರಿತಂತೆ ಬೆಂಗಳೂರಿನ ಕೆ.ಮಾಯಣ್ಣಗೌಡ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಎನ್. ಸತ್ಯನಾರಾಯಣ ಹಾಗೂ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಜಾಗೊಳಿಸಿ ಆದೇಶಿಸಿದೆ.

‘ಮೂರು ವರ್ಷಗಳ ಬಳಿಕ ತಡವಾಗಿ ಸಲ್ಲಿಸಲಾಗಿರುವ ಈ ಅರ್ಜಿಯನ್ನು ಮಾನ್ಯ ಮಾಡಲಾಗದು’ ಎಂದು ನ್ಯಾಯಪೀಠ ವಜಾಕ್ಕೆ ಕಾರಣ ನೀಡಿದೆ.

ಅಂತೆಯೇ, ‘ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಹಾಗೂ ನಂತರ ಸಲ್ಲಿಸಲಾಗಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ವಜಾಗೊಳಿಸಿದೆ. ಮತ್ತೊಮ್ಮೆ ಈ ಹಿಂದಿನ ತೀರ್ಪು ಮರು ಪರಿಶೀಲಿಸಲು ಸಾಧ್ಯವಿಲ್ಲ’ ಎಂದೂ ನ್ಯಾಯಪೀಠ ಹೇಳಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !