ಭಾನುವಾರ, ಸೆಪ್ಟೆಂಬರ್ 26, 2021
21 °C

ಸ್ಮಶಾನ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೆ.ಆರ್.ಪುರ ಸಮೀಪದ ಬಸವನಪುರ ವಾರ್ಡ್‌ನ ಶೀಗೆಹಳ್ಳಿ ಸ್ಮಶಾನ ಅಭಿವೃದ್ಧಿಗೆ ಪಾಲಿಕೆ ಸದಸ್ಯ ಜಯಪ್ರಕಾಶ್‌ ಚಾಲನೆ ನೀಡಿದರು.

₹ 10 ಲಕ್ಷ ವೆಚ್ಚದಲ್ಲಿ ಸ್ಮಶಾನಕ್ಕೆ ಹೊಸರೂಪ ನೀಡಲಾಗುತ್ತಿದೆ. ಇದರಲ್ಲಿ ತಡೆಗೋಡೆ ನಿರ್ಮಿಸಿ, ತಂತಿಬೇಲಿ ಅಳವಡಿಸುವ ಕಾಮಗಾರಿ ಸೇರಿದೆ.

‘ಸ್ಮಶಾನದಲ್ಲಿ ಪುಂಡಪೋಕರಿಗಳ ಕಾಟ ಹೆಚ್ಚಿದೆ. ಈ ಜಮೀನಿನ ಸುತ್ತ ಭೂಗಳ್ಳರ ಹಾವಳಿಯೂ ಹೆಚ್ಚುತ್ತಿದೆ. ಇಲ್ಲಿ ರಾತ್ರಿವೇಳೆ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರುಗಳು ಬಂದಿವೆ. ಹಾಗಾಗಿ ಕಾಮಗಾರಿ ಕೈಗೆತ್ತಿಕೊಂಡಿವೆ. ಮುಂದಿನ ದಿನಗಳಲ್ಲಿ ಪಕ್ಕಾ ರಸ್ತೆ ಮತ್ತು ವಿದ್ಯುತ್‌ ಸಂಪರ್ಕದ ವ್ಯವಸ್ಥೆ ಕಲ್ಪಿಸುತ್ತೇವೆ’ ಎಂದು ಜಯಪ್ರಕಾಶ್‌ ಹೇಳಿದರು.

‘ವಾರ್ಡ್‌ನಲ್ಲಿ ಕಸ ವಿಲೇವಾರಿ, ಕೆರೆ ಅಭಿವೃದ್ಧಿ, ಸಮುದಾಯ ಭವನ ನಿರ್ಮಾಣ, ಕುಡಿಯುವ ನೀರು ಪೂರೈಕೆ, ಒಳಚರಂಡಿ, ರಸ್ತೆಗಳ ಡಾಂಬರೀಕರಣಕ್ಕೆ ಆದ್ಯತೆ ನೀಡಲಾಗಿದೆ. ಎಲ್ಲ ವರ್ಗಗಳ ಜನರಿಗೂ ಸರ್ಕಾರದ ಸೌಲಭ್ಯಗಳನ್ನು ನೀಡಲಾಗುತ್ತಿದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು