ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ: ಕೃಷ್ಣ ಬೈರೇಗೌಡ

7

ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ: ಕೃಷ್ಣ ಬೈರೇಗೌಡ

Published:
Updated:
Deccan Herald

ಮಾಲೂರು: ‘ರಾಜಕೀಯ ಮಾಡಲು ನಮಗೂ ಬರುತ್ತದೆ. ಸರ್ಕಾರ ಉರುಳಿಸಲು ಬಿಜೆಪಿ ರೂಪಿಸುತ್ತಿರುವ ತಂತ್ರಕ್ಕೆ ನಾವು ಪ್ರತಿತಂತ್ರ ರೂಪಿಸಿಕೊಂಡಿದ್ದೇವೆ’ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ರಾಜ್ಯದ ಬಿಜೆಪಿ ಮುಖಂಡರಿಗೆ ‘ಆಪರೇಷನ್ ಕಮಲ’ ಹೊಸದಲ್ಲ. ಈ ಹಿಂದೆ ಅವರು ಮಾಡಿದ ಈ ಕೆಲಸಗಳು ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿವೆ. ಮತ್ತೆ ಅಧಿಕಾರದ ಆಸೆಗಾಗಿ ಆಪರೇಷನ್ ಕಮಲಕ್ಕೆ ಕೈಹಾಕಲು ಹೊರಟಿದ್ದಾರೆ. ಹಣದ ಆಮಿಷವೊಡ್ಡಿ ಶಾಸಕರನ್ನು ಸೆಳೆಯಲು ಮುಂದಾಗಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಯಾವ ಶಾಸಕರು ಆಮಿಷಕ್ಕೆ ಬಲಿಯಾಗುವುದಿಲ್ಲ’ ಎಂದರು.

‘ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಮನಾಮ ಜಪಿಸುವರು. ನಾವು ಧರ್ಮದಲ್ಲಿ ನಡೆಯುತ್ತಿದ್ದೇವೆ ಎನ್ನುವರು. ಆದರೆ ಅವರ ಪಕ್ಷದ ನಾಯಕರೇ ರಾಜ್ಯದಲ್ಲಿ ಅಧರ್ಮ ರಾಜಕೀಯ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.

‘ರಾಜ್ಯದಲ್ಲಿ ಕಾಂಗ್ರೆಸ್–ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ನಾನಾ ರೀತಿಯಲ್ಲಿ ತೊಂದರೆಗಳನ್ನು ನೀಡುತ್ತಿದೆ. ಕೇಂದ್ರ ಸರ್ಕಾರದ ಅಧೀನದ ‌ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಜ್ಯದ ಸಚಿವರ ಮೇಲೆ ದಬ್ಬಾಳಿಕೆ ಮಾಡುತ್ತಿದೆ’ ಎಂದು ದೂರಿದರು.

‘ಜನರು ಬಿಜೆಪಿ ನಾಯಕರ ಎಲ್ಲ ಕೃತ್ಯಗಳನ್ನು ಗಮನಿಸುತ್ತಿದ್ದಾರೆ. ‌ಸಮಯ ಬಂದಾಗ ತಕ್ಕ ಉತ್ತರ ನೀಡುತ್ತಾರೆ’  ಎಂದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !