‘ಶಾಲೆಗಳಲ್ಲಿ ಒಡೆಯರ್‌ ಜಯಂತಿ ಆಚರಣೆ’

ಸೋಮವಾರ, ಜೂನ್ 17, 2019
27 °C

‘ಶಾಲೆಗಳಲ್ಲಿ ಒಡೆಯರ್‌ ಜಯಂತಿ ಆಚರಣೆ’

Published:
Updated:
Prajavani

ಬೆಂಗಳೂರು: ‘ಪ್ರತಿವರ್ಷ ಒಡೆಯರ್‌ ಜಯಂತಿಯನ್ನು ಸರ್ಕಾರದ ಮಟ್ಟದಲ್ಲಷ್ಟೇ ಆಚರಿಸಲಾಗುತ್ತಿದೆ. ಮುಂದಿನ ವರ್ಷದಿಂದ ಎಲ್ಲ ಶಾಲೆಗಳಲ್ಲಿ ಜಯಂತಿ ಆಚರಿಸುವ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಜತೆಗೆ ಚರ್ಚಿಸುತ್ತೇನೆ’ ಎಂದು ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿಯಲ್ಲಿ ಅವರು ಮಾತನಾಡಿದರು. 

ಬಾಹ್ಯಾಕಾಶ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಮಾತನಾಡಿ, ‘ಆಗಿನ ಕಾಲದಲ್ಲೇ ವಿಜ್ಞಾನ ಹಾಗೂ ತಂತ್ರಜ್ಞಾನ ವಿಚಾರಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ದೂರದರ್ಶಿತ್ವ ಹೊಂದಿದ್ದರು. ಅವರ ನೆರವಿನಿಂದ ಏಷ್ಯಾದಲ್ಲೇ ಮೊಟ್ಟ ಮೊದಲ ವಿದ್ಯುತ್‌ ಪಡೆದ ನಗರ ನಿರ್ಮಾಣವಾಯಿತು ಎಂದು ನೆನೆದರು.

‘ವಿದೇಶಗಳಿಗೆ ಭೇಟಿ ನೀಡಿ ಅಲ್ಲಿನ ತಂತ್ರಜ್ಞಾನವನ್ನು ನಮ್ಮ ದೇಶಕ್ಕೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ. ಬೆಂಗಳೂರಿನಲ್ಲಿ ಎಚ್‌ಎಎಲ್‌ ವಿಮಾನ ತಯಾರಿಕಾ ಘಟಕ ನಿರ್ಮಾಣಕ್ಕೆ ಮೂಲ ಪ್ರೇರಣೆಯಾಗಿದ್ದರು. ಇದರಿಂದಾಗಿ, ಬೆಂಗಳೂರು ಇಂದು ವಿಜ್ಞಾನ ನಗರ ಎನಿಸಿಕೊಂಡಿದೆ’ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !