ಪ್ರಚೋದನಕಾರಿ ಭಾಷಣ: ಈಶ್ವರಪ್ಪ ಖುಲಾಸೆ

ಮಂಗಳವಾರ, ಏಪ್ರಿಲ್ 23, 2019
31 °C

ಪ್ರಚೋದನಕಾರಿ ಭಾಷಣ: ಈಶ್ವರಪ್ಪ ಖುಲಾಸೆ

Published:
Updated:

ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಸಂಬಂಧ ಶಾಸಕ ಕೆ.ಎಸ್ ಈಶ್ವರಪ್ಪ ಅವರನ್ನು ಖುಲಾಸೆಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

2013ರ ವಿಧಾನಸಭೆ ಚುನಾವಣೆ ವೇಳೆ ಶಿವಮೊಗ್ಗ ವಿಪ್ರ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈಶ್ವರಪ್ಪ ‘ಬ್ರಾಹ್ಮಣರ ಹೆಣ್ಣುಮಕ್ಕಳನ್ನು ಅಲ್ಪಸಂಖ್ಯಾತ ಸಮುದಾಯದ ಹುಡುಗರು ಹೊತ್ತುಕೊಂಡು ಹೋಗುತ್ತಾರೆ ಎಂದಿದ್ದಾರೆ. ಆ ಮೂಲಕ ಚುನಾವಣೆ ವೇಳೆ ದ್ವೇಷ ಭಾವನೆ ಮೂಡಿಸಲು ಪ್ರಯತ್ನಿಸಿದ್ದಾರೆ’ ಎಂದು ಆರೋಪಿಸಿ ಕೋಟೆ ಪೊಲೀಸ್ ಠಾಣೆಯಲ್ಲಿ ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದರು. ತನಿಖೆ ಪೂರ್ಣಗೊಂಡು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಸಾಕ್ಷಾಧಾರಗಳ ಕೊರತೆಯಿಂದ ಈಶ್ವರಪ್ಪ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !