ಕೆಎಸ್‌ಆರ್‌ಟಿಸಿ: ರಸ್ತೆ ಸುರಕ್ಷತಾ ಸಪ್ತಾಹ

7

ಕೆಎಸ್‌ಆರ್‌ಟಿಸಿ: ರಸ್ತೆ ಸುರಕ್ಷತಾ ಸಪ್ತಾಹ

Published:
Updated:
Prajavani

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಫೆ.4ರಿಂದ ಕಾರ್ಯಕ್ರಮಗಳು ಆರಂಭವಾಗಿವೆ. 

ಬೀದಿ ನಾಟಕಗಳು: ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ‘ಬದುಕಿ–ಬದುಕಿಸಿ’, ಕೆಂಪೇಗೌಡ ಬಸ್ ನಿಲ್ದಾಣದ ವಿಭಾಗದ ವತಿಯಿಂದ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ‘ರಸ್ತೆ ಸುರಕ್ಷತೆ–ಜೀವನರಕ್ಷೆ’ ಎಂಬ ಬೀದಿ ನಾಟಕ ಪ್ರದರ್ಶನಗೊಂಡಿತು.

ಬೆಂಗಳೂರು ಕೇಂದ್ರೀಯ ವಿಭಾಗ ಮತ್ತು ಸಂಚಾರ ಪೊಲೀಸ್‌ ವಿಭಾಗದ ಸಹಯೋಗದಲ್ಲಿ ಕಾಲ್ನಡಿಗೆ ಜಾಥಾ ನಡೆಯಿತು. ‘ನಿಧಾನ...ನಿಮ
ಗಾಗಿ ಕಾಯುತ್ತಿದ್ದಾರೆ ನಿಮ್ಮವರು’ ಶೀರ್ಷಿಕೆಯ ಮಾಹಿತಿ ಕೈಪಿಡಿ ಬಿಡುಗಡೆ ಮಾಡಲಾಯಿತು.

‘ನಿಗಮದ 17 ವಿಭಾಗಗಳಲ್ಲಿ ಈ ಸಪ್ತಾಹ ಆಚರಿಸಲಾಗುತ್ತಿದೆ. ಅದಕ್ಕಾಗಿ ಪ್ರತಿ ಘಟಕಕ್ಕೆ ₹25 ಸಾವಿರ ನೀಡಲಾಗಿದೆ. ಅಪಘಾತ ಹಿನ್ನೆಲೆಯಿರುವ ಚಾಲಕರನ್ನು ಗುರುತಿಸಿ, ನಿಗಮದ ತರಬೇತಿ ಕೇಂದ್ರಗಳಲ್ಲಿ ತೀವ್ರ ತರಬೇತಿ ನೀಡಲಾಗುತ್ತಿದೆ’ ಎಂದು ನಿಗಮದ ಅಧಿಕಾರಿಗಳು ತಿಳಿಸಿದರು. 

ಪೊಲೀಸ್, ಆರ್‌ಟಿಒ ಅಧಿಕಾರಿಗಳು, ವೋಲ್ವೋ, ಅರವಿಂದ್ ಮೋಟಾರ್ಸ್, ಟಾಟಾ, ಅಶೋಕ್ ಲೇಲ್ಯಾಂಡ್ ಕಂಪನಿಗಳ ಪರಿಣತರಿಂದ ತರಬೇತಿ ನಡೆಯಿತು. ನಿಗಮದ ಮಂಡ್ಯ, ಕೋಲಾರ, ಚಿಕ್ಕಮಗಳೂರು ವಿಭಾಗಗಳಲ್ಲಿ ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ ಮಾಡಲಾಯಿತು.

‘ರಸ್ತೆ ಸುರಕ್ಷತಾ ಸಪ್ತಾಹ ಕೇವಲ ಕಾರ್ಯಕ್ರಮಕ್ಕೆ ಚಾಲನೆ ನೀಡುವುದರಲ್ಲಿಯೇ ಅರ್ಥಕಳೆದುಕೊಳ್ಳಬಾರದು. ಅದರ ಉದ್ದೇಶ ಹಾಗೂ ಅನುಷ್ಠಾನದಲ್ಲಿ ಸಂಸ್ಥೆಯ ಸಿಬ್ಬಂದಿ ಹಾಗೂ ಸಾರ್ವಜನಿಕರ ಪಾತ್ರ ಮುಖ್ಯ’ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಹೇಳಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !