ಸೋಮವಾರ, ಅಕ್ಟೋಬರ್ 21, 2019
24 °C

ಯಾದಗಿರಿಯಿಂದ ಧಾರವಾಡಕ್ಕೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: 15ಮಂದಿಗೆ ಗಾಯ

Published:
Updated:
Prajavani

ಗದಗ: ನರೇಗಲ್-ಗಜೇಂದ್ರಗಡ ಮಾರ್ಗ ಮಧ್ಯೆ ನಿಡಗುಂದಿ ಸಮೀಪ ಶನಿವಾರ ನಸುಕಿನಲ್ಲಿ ಯಾದಗಿರಿಯಿಂದ ಧಾರವಾಡಕ್ಕೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದೆ.

ಬಸ್ ನಲ್ಲಿದ್ದ 15 ಜನರಿಗೆ ಗಂಭೀರ ಗಾಯಗಳಾಗಿದ್ದು ಗದಗ ಜಿಲ್ಲಾ ಆಸ್ಪತ್ರೆ ಹಾಗೂ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಯಾವುದೇ ಜೀವಹಾನಿ ಆಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೊಪ್ಪಳ ಜಿಲ್ಲೆ ಯಲಬುರ್ಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post Comments (+)