ಸೋಮವಾರ, ಡಿಸೆಂಬರ್ 9, 2019
18 °C

ಕೆಎಸ್‌ಆರ್‌ಟಿಸಿ: ಅಂಚೆ ಮತದಾನ ಸುಲಭಕ್ಕೆ ವ್ಯವಸ್ಥೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ ಚಾಲಕರು ಮತ್ತು ನಿರ್ವಾಹಕರ ಅಂಚೆ ಮತದಾನ ಸುಗಮಕ್ಕೆ ಇದೇ ಮೊದಲ ಬಾರಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿದೆ.

ಕರ್ತವ್ಯದಲ್ಲಿರುವ ಸಿಬ್ಬಂದಿಗೆ ಅಂಚೆ ಮತಪತ್ರಗಳು ಸಿಗುವಂತೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ. ನೋಡಲ್ ಅಧಿಕಾರಿಗಳ ಬಳಿಯೇ ಮತ ಪತ್ರಗಳನ್ನು ವಾಪಸ್ ನೀಡಬಹುದಾಗಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕರು ಘೋಷಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ, ಕೆಂಪೇಗೌಡ ಬಸ್ ನಿಲ್ದಾಣ, ಎಲ್ಲ ವಿಭಾಗಗಳು, ಪ್ರಾದೇಶಿಕ ಕಾರ್ಯಾಗಾರಗಳಿಗೆ ತಲಾ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ನಿಗಮ ತಿಳಿಸಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು