ಭಾನುವಾರ, ಆಗಸ್ಟ್ 9, 2020
23 °C

ಕೆಎಸ್‌ಆರ್‌ಟಿಸಿಯಿಂದ ‘ತುರ್ತು ಸ್ಪಂದನಾ ದಳ’ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಸ್‌ ನಿಲ್ದಾಣಗಳಲ್ಲಿ ಸಂಭವನೀಯ ಅನಾಹುತಗಳನ್ನು ತಪ್ಪಿಸಲು ವಿಭಾಗಮಟ್ಟದಲ್ಲಿ ‘ತುರ್ತು ಸ್ಪಂದನಾ ದಳ’ ರಚಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದ್ದಾರೆ.

‘ವಿಭಾಗಮಟ್ಟದಲ್ಲಿ ರಚಿಸಿದ ದಳದ ಕಾರ್ಯ ಚಟುವಟಿಕೆಯನ್ನು ಕೇಂದ್ರ ಕಚೇರಿಮಟ್ಟದಲ್ಲಿ ರಚಿಸಿದ ವಿಶೇಷ ತಂಡ ಮೇಲ್ವಿಚಾರಣೆ ಮಾಡಲಿದೆ’ ಎಂದೂ ಅವರು ಹೇಳಿದ್ದಾರೆ.

ವಿಭಾಗೀಯ ನಿಯಂತ್ರಣಾಧಿಕಾರಿಗಳ ನೇತೃತ್ವದಲ್ಲಿ ಆಯಾ ವಿಭಾಗದ ಭದ್ರತಾ ಸಿಬ್ಬಂದಿಯನ್ನು ಒಳಗೊಂಡ ದಳ ಬಸ್‌ ನಿಲ್ದಾಣಗಳಲ್ಲಿ ನಿರಂತರ ಗಸ್ತು ತಿರುಗಲಿದೆ. ಈ ದಳದ ಜೊತೆ ಆಯಾ ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿದ್ದಾರೆ ಎಂದೂ ಅವರು ಹೇಳಿದ್ದಾರೆ.

‘ಬಸ್‌ ನಿಲ್ದಾಣಗಳಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾದರೆ ನಿಗಮದ ಅಧಿಕಾರಿಗಳ ಗಮನಕ್ಕೆ ತರಬೇಕು’ ಎಂದೂ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು