ಸೋಮವಾರ, ಸೆಪ್ಟೆಂಬರ್ 27, 2021
21 °C
ಕುಂದಗೋಳ ಉಪ ಚುನಾವಣೆ

ಕುಸುಮಾವತಿಗೆ ಕಾರ್ಮಿಕರು- ರೈತರ ಬೆಂಬಲ: ಎಸ್.ಎಸ್. ಪ್ರಕಾಶಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಕಾರ್ಮಿಕರು ಹಾಗೂ ರೈತರು ಕುಂದಗೋಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರನ್ನು ಬೆಂಬಲಿಸಲಿದ್ದಾರೆ ಎಂದು ಕಾಂಗ್ರೆಸ್ ಕಾರ್ಮಿಕ ರಾಜ್ಯ ಘಟಕದ ಅಧ್ಯಕ್ಷ ಎಸ್.ಎಸ್. ಪ್ರಕಾಶಂ‌ ವಿಶ್ವಾಸ ವ್ಯಕ್ತಪಡಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಕಾರ್ಮಿಕರು ಹಾಗೂ ರೈತರನ್ನು ‌ಕಡೆಗಣಿಸಿದೆ. ಸೌಲಭ್ಯಗಳನ್ನು ಕಡಿತಗೊಳಿಸಿದೆ. ರಾಜ್ಯ ಸರ್ಕಾರ ಕಾರ್ಮಿಕ ಪರವಾಗಿ ಹಲವು ಯೋಜನೆ ಜಾರಿಗೊಳಿಸಿದೆ ಎಂದರು.
ಗುತ್ತಿಗೆ ‌ಪದ್ಧತಿಯನ್ನು ರದ್ದುಗೊಳಿಸಿ ಸರ್ಕಾರವೇ ನೇರ ವೇತನ ಪಾವತಿ ಮಾಡಬೇಕು ಎಂದು ಮುಖ್ಯಮಂತ್ರಿ ಅವರಿಗೆ ಮನವಿ‌ಮಾಡಲಾಗಿದೆ. ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎಂದರು.

ರಾಜ್ಯ ಕಾರ್ಮಿಕ ಮಂಡಳಿಯಲ್ಲಿ ಎಂಟು ಸಾವಿರ ಕೋಟಿ ಹಣವಿದೆ. ಕಾರ್ಮಿಕರು ಸದಸ್ಯತ್ವ ಪಡೆದ ವಿವಿಧ‌ಬಯೋಜನೆಗಳ ಲಾಭ ಪಡೆದುಕೊಳ್ಳಬೇಕು. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸಿಕ್ಕ ಕಾರ್ಮಿಕರನ್ನು ಮಾತನಾಡಿಸಿದಾಗ ಅವರಲ್ಲಿ ಬಹುತೇಕ ಮಂದಿ ಸದಸ್ಯತ್ವ ಪಡೆಯದಿರುವುದು ಗೊತ್ತಾಯಿತು ಎಂದರು.

ಕಾಂಗ್ರೆಸ್ ಒಬಿಸಿ ರಾಜ್ಯ ಘಟಕದ ಅಧ್ಯಕ್ಷ ಎಂ.ಎಸ್. ಮುತ್ತುರಾಜ್, ಕಾರ್ಮಿಕ ಘಟಕದ ಕಾರ್ಯಾಧ್ಯಕ್ಷ ಡಾ. ಮೋಹನ್ ರಾವ್ ನಾಲವಡೆ, ಮುಖಂಡರಾದ ರಾಜು ಹಿರೇವಡೆಯರ, ಶಿವಲಿಂಗಪ್ಪ ಶ್ರೀಂಗಾರಿ, ಮಣಿಕಂಠ ಗುಡಿಹಾಳ, ತಾಜುದ್ದೀನ ಮುನವಳ್ಳಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು