ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಲ್‌ಬಾಗ್‌: ವಾಹನ ನಿರ್ಬಂಧಕ್ಕೆ ಮೆಚ್ಚುಗೆ

Last Updated 15 ಫೆಬ್ರುವರಿ 2019, 19:46 IST
ಅಕ್ಷರ ಗಾತ್ರ

ಬೆಂಗಳೂರು: ತೋಟಗಾರಿಕೆ ಇಲಾಖೆಯ ನಿರ್ದೇಶಕರೂ ಸೇರಿದಂತೆ ಯಾವುದೇ ಅಧಿಕಾರಿಗಳ ವಾಹನಗಳು ಲಾಲ್‌ಬಾಗ್‌ ಉದ್ಯಾನಕ್ಕೆ ಪ್ರವೇಶಿಸದಂತೆ ನಿರ್ಬಂಧ ಹೇರಲು ನಿರ್ಣಯಿಸಿರುವ ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ಅವರಿಗೆ ಕರ್ನಾಟಕ ನಡಿಗೆದಾರರ ಒಕ್ಕೂಟವು ಅಭಿನಂದನೆ ಸಲ್ಲಿಸಿದೆ.

ಶುಕ್ರವಾರ ‌ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಸಿ.ಕೆ.ರವಿಚಂದ್ರ, ‘ಉದ್ಯಾನಕ್ಕೆ ಬರುವ ವಾಹನಗಳಿಗೆ ನಿರ್ಬಂಧಿಸುವಂತೆ ಒಕ್ಕೂಟವು 2015ರಲ್ಲಿ‌ ನಿವೃತ್ತ ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರಕುಮಾರ್‌ ಅವರ ನೇತೃತ್ವದಲ್ಲಿ ಮನವಿ ಮಾಡಿತ್ತು’ ಎಂದು ಹೇಳಿದರು.

‘ನಗರದ ಕೆಲವು ಉದ್ಯಾನಗಳಿಗೆ ಕಾಲಿಡದ ಸ್ಥಿತಿಯಲ್ಲಿವೆ. ಅವುಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ವಿದೇಶಿ ಗಿಡಗಳು ನೆಡುವ ಬದಲಿಗೆ ದೇಶದ ಆಲ, ಅರಳಿ, ಹೊಂಗೆ, ಬೇವಿನ ಗಿಡಗಳನ್ನು ಬೆಳೆಸಬೇಕು’ ಎಂದು ಮನವಿ ಮಾಡಿದರು.

‘ಪ್ರಜಾವಾಣಿ’ ಮತ್ತು ಡೆಕ್ಕನ್‌ ಹೆರಾಲ್ಡ್‌ ಪತ್ರಿಕೆಗಳಿಂದ ಲಾಲ್‌ಬಾಗ್‌ನಲ್ಲಿ ನಡೆಸಲಾಗಿದ್ದ ಜನಸ್ಪಂದನ ಸಭೆಯಲ್ಲಿ ಬಂದ ದೂರುಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಾಲ್‌ಬಾಗ್‌ ಉದ್ಯಾನದಲ್ಲಿ ವಾಹನಗಳ ಓಡಾಟ ನಿರ್ಬಂಧಿಸಲು ತೀರ್ಮಾನಿಸಲಾಗಿತ್ತು.

ಉದ್ಯಾನದಲ್ಲಿ ಅಧಿಕಾರಿಗಳ ವಾಹನಗಳ ಓಡಾಟಕ್ಕೂ ನಿರ್ಬಂಧ ವಿಧಿಸಬೇಕು ಎನ್ನುವುದು ಜನಸ್ಪಂದನದಲ್ಲಿ ಪಾಲ್ಗೊಂಡ ಎಲ್ಲರ ಪ್ರಮುಖ ಬೇಡಿಕೆಯಾಗಿತ್ತು.

‘ಪಾರ್ಕಿಂಗ್‌ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ಒಳಗಿನ ಕಚೇರಿಗಳಿಗೆ ತೆರಳುವುದಕ್ಕೆ ಬ್ಯಾಟರಿಚಾಲಿತ ವಾಹನಗಳ ವ್ಯವಸ್ಥೆ ಮಾಡಲು ಇನ್ನು ಒಂದೂವರೆ ತಿಂಗಳು ಕಾಲಾವಕಾಶ ಬೇಕು. ಬಳಿಕ ನನ್ನ ವಾಹನಕ್ಕೂ ಉದ್ಯಾನದೊಳಗೆ ಪ್ರವೇಶಿಸಲು ಅವಕಾಶ ಇರಲಾರದು’ ಎಂದು ಇಲಾಖೆಯ ನಿರ್ದೇಶಕ ವೈ.ಎಸ್‌.ಪಾಟೀಲ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT