ಶನಿವಾರ, ಏಪ್ರಿಲ್ 17, 2021
32 °C

ರೆಸಾರ್ಟ್‌ನತ್ತ ಶಾಸಕರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಶಾಸಕರು ರೆಸಾರ್ಟ್‌ನಲ್ಲೇ ಮತ್ತೆ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ವಿಧಾನಸಭೆ ಕಲಾಪ ಮುಗಿದ ನಂತರ ರೆಸಾರ್ಟ್‌ಗೆ ಕರೆದುಕೊಂಡು ಹೋಗಲಾಗಿದೆ.

ಆಪರೇಷನ್ ಕಮಲ, ಶಾಸಕರ ರಾಜೀನಾಮೆಯಿಂದ ಕಂಗಾಲಾಗಿರುವ ಕಾಂಗ್ರೆಸ್, ಜೆಡಿಎಸ್ ಮುಖಂಡರು, ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಸಲುವಾಗಿ ವಿಧಾನಸಭೆ ಅಧಿವೇಶನ ಆರಂಭಕ್ಕೂ ಮುನ್ನ ರೇಸಾರ್ಟ್‌ನಲ್ಲೇ ತಂಗುವ ವ್ಯವಸ್ಥೆ ಮಾಡಿದ್ದರು. ಬಿಜೆಪಿ ಸಹ ತಮ್ಮ ಶಾಸಕರ ಸುರಕ್ಷತೆ ದೃಷ್ಟಿಯಿಂದ ರೇಸಾರ್ಟ್‌ನಲ್ಲೇ ವಾಸ್ತವ್ಯ ಕಲ್ಪಿಸಿದೆ.

ಅಧಿವೇಶನದ ಸಮಯದಲ್ಲಿ ಶುಕ್ರವಾರಕ್ಕೆ ಕಲಾಪ ಕೊನೆಗೊಂಡು, ಅಂದೇ ರಾತ್ರಿ ಅಥವಾ ಮರುದಿನ ತಮ್ಮ ಕ್ಷೇತ್ರಗಳಿಗೆ ತೆರಳುತ್ತಿದ್ದರು. ಮತ್ತೆ ಸೋಮವಾರ ಆರಂಭವಾಗುವ ಕಲಾಪದಲ್ಲಿ ಭಾಗವಹಿಸುತ್ತಿದ್ದರು. ಆದರೆ ಈ ಸಲ ಮುಖ್ಯಮಂತ್ರಿ ವಿಶ್ವಾಸಮತ ನಿರ್ಣಯ ಮಂಡನೆ ಮಾಡಿದ್ದು, ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಸಲುವಾಗಿ ಕ್ಷೇತ್ರಗಳಿಗೆ ಕಳುಹಿಸಿಲ್ಲ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು