ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಕ್ಷರತೆ: 20 ಜಿಲ್ಲೆಗಳಲ್ಲಿ ವಿಶೇಷ ಕಾರ್ಯಕ್ರಮ

ಪ್ರಚಾರ ಪತ್ರ ಬಿಡುಗಡೆ; ನಂಜುಂಡಪ್ಪ ವರದಿಯಲ್ಲಿ ಗುರುತಿಸಲಾದ ಜಿಲ್ಲೆಗಳು
Last Updated 26 ಡಿಸೆಂಬರ್ 2018, 20:17 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಸಾಕ್ಷರತಾ ಪ್ರಮಾಣ ಹೆಚ್ಚಿಸಲು 20 ಜಿಲ್ಲೆಗಳ 95 ತಾಲ್ಲೂಕುಗಳ ಹಿಂದುಳಿದ ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಡಾ. ಡಿ.ಎಂ.ನಂಜುಂಡಪ್ಪ ವರದಿಯಲ್ಲಿ ಗುರುತಿಸಲಾದ ಜಿಲ್ಲೆಗಳನ್ನು ಈ ಕಾರ್ಯಕ್ರಮಕ್ಕಾಗಿ ಆಯ್ಕೆ ಮಾಡಲಾಗಿದೆ ಎಂದು ಲೋಕ ಶಿಕ್ಷಣ ನಿರ್ದೇಶನಾಲಯದ ಅಧಿಕಾರಿಗಳು ಹೇಳಿದರು. ಇತ್ತೀಚೆಗೆ ನಡೆದ ಸಭೆಯಲ್ಲಿಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಶಿಕ್ಷಣ ಇಲಾಖೆ ಆಯುಕ್ತ ಪಿ.ಸಿ.ಜಾಫರ್‌,ಲೋಕ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾದ ಕೆ.ಎನ್.ವಿಜಯ ಅವರು ಈ ಕಾರ್ಯಕ್ರಮದ ಪ್ರಚಾರ ಪತ್ರಗಳನ್ನು ಬಿಡುಗಡೆ ಮಾಡಿದರು.

ಕಾರ್ಯಕ್ರಮ ಪರಿಕಲ್ಪನೆಯ ನಾಲ್ಕು ಮಾದರಿಯ ಭಿತ್ತಿಪತ್ರಗಳು, ಒಂದು ಸ್ಟಿಕ್ಕರ್‌ ಹಾಗೂ ಒಂದು ಮಾಹಿತಿ ಪತ್ರವನ್ನು ಬಿಡುಗಡೆ ಮಾಡಲಾಯಿತು.

ಎಲ್ಲೆಲ್ಲಿ ಕಾರ್ಯಕ್ರಮ?: ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಳಗಾವಿ/ಚಿಕ್ಕೋಡಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ, ಹಾವೇರಿ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು/ಮಧುಗಿರಿ, ವಿಜಯಪುರ, ಬಳ್ಳಾರಿ, ಬೀದರ್, ಕೊಪ್ಪಳ, ರಾಯಚೂರು, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನಗರ ಹಾಗೂ ಕೊಳೆಗೇರಿ ಪ್ರದೇಶಗಳ ಜನರಿಗೆ, ಸ್ತ್ರೀಶಕ್ತಿ ಸಂಘಗಳ ಸದಸ್ಯರಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೈದರಾಬಾದ್‌ ಕರ್ನಾಟಕ ಪ್ರದೇಶದ 6 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ 1,500 ಸದಸ್ಯರಿಗೆ 21 ದಿನಗಳ ಸಾಕ್ಷರತಾ ಶಿಬಿರ ಹಮ್ಮಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT