ಲೋಕದಳ ಪಕ್ಷದಿಂದ ರಾಜ್ಯದಲ್ಲೂ ಸ್ಪರ್ಧೆ

7

ಲೋಕದಳ ಪಕ್ಷದಿಂದ ರಾಜ್ಯದಲ್ಲೂ ಸ್ಪರ್ಧೆ

Published:
Updated:

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಲೋಕದಳ ಪಕ್ಷದ ಘಟಕ ಅಸ್ತಿತ್ವಕ್ಕೆ ಬಂದಿದ್ದು, ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್‌ ಮಥಾಯ್‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

‘ಡಿ.ರಮೇಶ್‌ ಗುರುದೇವ್‌ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ರಾಜ್ಯದ ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ, ಶಿವಮೊಗ್ಗ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರಗಳಿಂದ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ’ ಎಂದು ಹೇಳಿದರು.

‘ಮಾಜಿ ಪ್ರಧಾನಿ ಚರಣ್‌ ಸಿಂಗ್‌ ಅವರ ಸಾಧನೆಗಳನ್ನು ಇಟ್ಟುಕೊಂಡು ಜನರ ಬಳಿ ತೆರಳುತ್ತೇವೆ. ರಾಜ್ಯದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವ ಕಡೆ ಗಮನಹರಿಸುತ್ತೇವೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !